ಕೊಪ್ಪಳ, ಅ. ೧೩: ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಚೇರಿಯಿಂದ ಸಾರ್ವಜನಿಕರ ಕುಂದು ಕೊರತೆ ಹಾಗೂ ದೂರುಗಳ ಕುರಿತು ಇದೇ ಅಕ್ಟೋಬರ್ ೧೭ ರಿಂದ ಅ. ೨೦ ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಹವಾಲು ಸ್ವೀಕಾರ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ರಾಜ್ಯ, ಬೆಂಗಳೂರು ರವರ ಆದೇಶದ ಮೇರೆಗೆ ಸರ್ಕಾರಿ ಕಛೇರಿಯ ಯಾವುದೇ ಅಧಿಕಾರಿ ಸಾರ್ವಜನಿಕರ ಕೆಲಸಕ್ಕಾಗಿ ಲಂಚದ ಬೇಡಿಕೆ ಇಟ್ಟಲ್ಲಿ ಅಥವಾ ಅಕ್ರಮವಾಗಿ ಆಸ್ತಿ ಗಳಿಸಿದ್ದು ಕಂಡು ಬಂದರೆ ದೂರು ಸಲ್ಲಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ. ಅಲ್ಲದೇ ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಭ ಮಾಡುತ್ತಿರುವುದು ಮತ್ತು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಹಾಗೂ ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಮಾಡುವಂತಹ ಪ್ರಕರಣಗಳಲ್ಲಿಯೂ ಸಹ ದೂರು ಸಲ್ಲಿಸಬಹುದು.
ಅಹವಾಲು ಸ್ವೀಕಾರ ತಾಲೂಕುವಾರು ವಿವರ :
ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಕಚೇರಿಯಿಂದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆ ಹಾಗೂ ದೂರುಗಳ ಅಹವಾಲು ಸ್ವೀಕರಿಸಲಿದ್ದಾರೆ. ಅದರಂತೆ ಅಕ್ಟೋಬರ್ ೧೭ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೦೨ ಗಂಟೆಯವರೆಗೆ ಗಂಗಾವತಿಯ ಹೊಸ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ ೦೩ ಗಂಟೆಯಿಂದ ಸಂಜೆ ೦೫ ಗಂಟೆಯವರೆ ಕಾರಟಗಿಯ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ. ಅ. ೧೮ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೦೨ ಗಂಟೆಯವರೆಗೆ ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ ೦೩ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ಕನಕಗಿರಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಅ. ೧೯ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೦೨ ಗಂಟೆಯವರೆಗೆ ಯಲಬುರ್ಗಾ ತಾಲ್ಲೂಕಿನ ಹೊಸ ಸರ್ಕ್ಯೂಟ್ ಹೌಸ್ ಹಾಗೂ ಅದೇ ದಿನ ಮಧ್ಯಾಹ್ನ ೦೩ ಗಂಟೆಯಿಂದ ಸಂಜೆ ೦೫ ಗಂಟೆಯವರೆ ಕುಕನೂರ ತಾಲೂಕಿನ ಹೊಸ ಸರ್ಕ್ಯೂಟ್ ಹೌಸ್ನಲ್ಲಿ ನಡೆಯಲಿದೆ ಮತ್ತು ಅ. ೨೦ ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೦೨ ಗಂಟೆಯವರೆಗೆ ಕೊಪ್ಪಳ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು/ ಅಹವಾಲು ಸ್ವೀಕಾರ ನಡೆಯಲಿದೆ.
ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೫೩೯-೨೯೫೨೦೦ ಅಥವಾ ೨೨೦೫೩೩ ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ, ಕೊಪ್ಪಳ ಪೊಲೀಸ್ ಉಪಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅ. ೧೭ ರಿಂದ ೨೦ ರವರೆಗೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023