This is the title of the web page
This is the title of the web page

Please assign a menu to the primary menu location under menu

State

ಸಚಿವ ಎಚ್.ಕೆ.ಪಾಟೀಲ ಅವರಿಂದ ಕುಂದು ಕೊರತೆ ಕುರಿತು ಅಹವಾಲು ಸ್ವೀಕಾರ


ಗದಗ ಅ.೦೯: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿನ ಕಾರ್ಯಾಲಯದಲ್ಲಿ ಬುಧವಾರ ಬೆಳಗ್ಗೆ ಸಾರ್ವಜನಿಕರಿಂದ ಕುಂದು ಕೊರತೆ ಕುರಿತು ಅಹವಾಲು ಸ್ವೀಕರಿಸಿದರು.
ಸಾರ್ವಜನಿಕರು ನಗರಸಭೆಯ ರಸ್ತೆಗಳ ಹಾಗೂ ಪ್ರಮುಖ ವೃತ್ತಗಳ ಸ್ವಚ್ಚತೆ ಹಾಗೂ ನಿಯಮಿತ ಕುಡಿಯುವ ನೀರಿನ ಸರಬರಾಜು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು. ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಡಿ ಪಿಂಚಣಿ ಸೌಲಭ್ಯ ಕೋರಿ ಸಲ್ಲಿಸಿದ ಅಹವಾಲುಗಳನ್ನು ಪರಿಶೀಲಿಸಿ ಅರ್ಹರಿಗೆ ಪಿಂಚಣಿ ಸೌಲಭ್ಯ ಖಂಡಿತವಾಗಿಯೂ ಒದಗಿಸಲಾಗುವದು ಎಂದು ಭರವಸೆ ನೀಡಿದರು.


Leave a Reply