This is the title of the web page
This is the title of the web page

Please assign a menu to the primary menu location under menu

State

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಒತ್ತಡ ಕಡಿಮೆ ಮಾಡಿಕೊಳ್ಳಿ : ಕರಡಿ ಸಂಗಣ್ಣ


ಕೊಪ್ಪಳ, ಸೆ. ೨೮ : ಯುವ ಜನರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಾನಸಿಕ, ದೈಹೀಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ ಎಂದು ಸಂಸದ ಕರಡಿ ಸಂಗಣ್ಣ ಅವರು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಭಾಗ್ಯನಗರದ ನವಚೇತನ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಇತ್ತೀಚೆಗೆ (ಸೆ.೨೬) ಹಮ್ಮಿಕೊಳ್ಳಾಗಿದ್ದ ಯುವ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆಯಲ್ಲಿನ ಸಾಂಸ್ಕೃತಿಕ ಅಭಿರುಚಿಯನ್ನು ಪ್ರೋತ್ಸಾಹಿಸಲು “ಯುವ ಸೌರಭ’’ ಕಾರ್ಯಕ್ರಮವು ಯುವ ಜನತೆಯನ್ನು ತನ್ನತ್ತ ಸೇಳೆಯುವ ಶಕ್ತಿಯನ್ನು ಹೊಂದಿದೆ. ಸಾಮನ್ಯವಾಗಿ ಇಂದಿನ ಯುವ ಜನತೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಒತ್ತಡಕ್ಕೆ ಒಳಗಾಗಿರುತ್ತಾರೆ. ಇಂತಹ ಒತ್ತಡವನ್ನು ಕಡಿಮೆ ಮಾಡುವಲ್ಲಿ ಯುವ ಸೌರಭದಂತ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗುತ್ತಿವೆ. ಆದ್ದರಿಂದ ಯುವಕರು ಇಂತಹ ಸಾಂಸ್ಕೃತಿ ಚಟುವಟಿಕೆಗಳಲ್ಲಿ ಪಾಲ್ಗೊಂಡು ಒತ್ತಡರಹಿತವಾಗಿ ಹಾಗೂ ಸರ್ವತೋಮುಖ ಬೆಳವಣಿಗೆಯೊಂದಿಗೆ ಜೀವನ ಸಾಗಿಸಿ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗ್ಯನಗರದ ನವಚೇತನ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜಿನ ಕಾಲೇಜಿನ ಪ್ರಾಂಶುಪಾಲರಾದ ಸಂಗೀತಾ ಕಲ್ಲೇಶ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯ ಪರಶುರಾಮ ನಾಯಕ್, ನವಚೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಮೀನಾಕ್ಷಮ್ಮ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ಶಾಲಾ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply