ಗದಗ ಜುಲೈ ೩೧: ಗದಗ ತಾಲೂಕಿನಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಈಗಾಗಲೇ ನೊಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ನಿರೀಕ್ಷಕರ ಕಚೇರಿ, ಗದಗ ೧ ನೇ ವೃತ್ತ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿ, ಗದಗ ೨ನೇ ವೃತ್ತ , ಗದಗ ಇಲ್ಲಿ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ಸಂಸ್ಥೆಗಳು ೧೫ ದಿನಗಳ ಒಳಗಾಗಿ ರಾಜ್ಯ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ hಣಣಠಿs://ತಿತಿತಿ.eಞಚಿಡಿmiಞಚಿ.ಞಚಿಡಿಟಿಚಿಣಚಿಞಚಿ.gov.iಟಿ/ eಞಚಿಡಿmiಞಚಿಡಿ/Sಣಚಿಣiಛಿ/ಊome.ಚಿsಠಿx ಆನ್‌ಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೊಂದಣಿ ಪತ್ರ ಪಡೆದುಕೊಳ್ಳಬಹುದಾಗಿದೆ ಎಂದು ಗದಗ ೨ನೇ ವೃತ್ತದ ಕಾರ್ಮಿಕ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
Gadi Kannadiga > State > ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳ ನೊಂದಣಿ ಕಡ್ಡಾಯ
ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳ ನೊಂದಣಿ ಕಡ್ಡಾಯ
Suresh31/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023