This is the title of the web page
This is the title of the web page

Please assign a menu to the primary menu location under menu

State

ಗಣರಾಜ್ಯೋತ್ಸವ ಆಚರಣೆ : ಪೂರ್ವಭಾವಿ ಸಭೆ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಿ


ಗದಗ ಜನೆವರಿ ೨೦ : ಜಿಲ್ಲೆಯಲ್ಲಿ ಜನೆವರಿ ೨೬ ರಂದು ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಗಣರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೆಕೆಂದು ಸೂಚಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಗಣರಾಜ್ಯೋತ್ಸವ ದಿನದ ಹಿಂದಿನ ದಿನ ಅಂದರೆ ಜನೆವರಿ ೨೫ ರಂದು ಹಾಗೂ ಗಣರಾಜ್ಯೋತ್ಸವದ ದಿನ ಜನೆವರಿ ೨೬ ರಂದು ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆ೭.೩೦ ರೊಳಗೆ ಮುಗಿಸಿಕೊಂಡು ಬೆ.೮.೩೦ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು.ಅಂದು ಬೆ. ೯ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕಾಗುತ್ತದೆ. ನಂತರ ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾದಳಗಳಿಂದ ಪರೇಡ್ , ಪಥ ಸಂಚಲನ , ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ , ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಈಗಾಗಲೇ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪುರಸ್ಕೃತರಾದವರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೆಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ , ಮೂಲಭೂತ ಸೌಕರ್ಯಗಳ ವ್ಯವಸ್ಥೆ , ಆಮಂತ್ರಣ ಪತ್ರಿಕೆ ಮುದ್ರಣ, ಸ್ಯಾನಿಟೈಜರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಾಬಾಸಾಬ ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವಿರಯ್ಯ ಸ್ವಾಮಿ ಬಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Gadi Kannadiga

Leave a Reply