This is the title of the web page
This is the title of the web page

Please assign a menu to the primary menu location under menu

Local News

ಮಗುವಿನ ಜೈವಿಕ ಪಾಲಕರು ಸಂಪರ್ಕಿಸಲು ಕೋರಿಕೆ


ಬೆಳಗಾವಿ,ಜುಲೈ.೦೭: ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದ ತಹಶೀಲ್ದಾರ್ ಕಚೇರಿಯ ಕಂಪೌಂಡ ಬಳಿ ನವಜಾತ ಹೆಣ್ಣು ಶಿಶುವನ್ನು ಅಪರಿಚಿತರು ಏಪ್ರಿಲ್ ೧೧, ೨೦೨೨ ರಂದು ಬಿಳಿ ಬಟ್ಟೆಯಲ್ಲಿ ಸುತ್ತಿ ಬಿಟ್ಟು ಹೊಗಿದ್ದು, ಸ್ಥಳಿಯರು ಈ ಕುರಿತು ಪೋಲಿಸ್ ಇಲಾಖೆ, ಸರ್ಕಾರಿ ಆಸ್ಪತ್ರೆಯ ವೈದ್ಯರು, ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಿರುತ್ತಾರೆ. ಮಗುವನ್ನು ರಕ್ಷಣೆ ಮಾಡಿ ಮಗುವಿನ ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿರುತ್ತಾರೆ.
ಮಗುವಿನ ಆರೋಗ್ಯ ಸುಧಾರಣೆಯಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಿದ್ದು, ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಇವರು ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ದತ್ತು ಸ್ವೀಕಾರ ಕೇಂದ್ರ, ಬೆಳಗಾವಿಯಲ್ಲಿ ಅಭೀರಕ್ಷಣೆಗಾಗಿ ಇಡಲಾಗಿದೆ.
ಮಗುವಿನ ಜೈವಿಕ ಪಾಲಕರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉತ್ತರ ಪ್ರವೇಶ ದ್ವಾರ, ೨ನೇ ಮಹಡಿ, ಕೊಠಡಿ ಸಂ:೨೦೪, ಸುವರ್ಣ ವಿಧಾನಸೌಧ, ಬೆಳಗಾವಿ ದೂ: ೦೮೩೧-೨೪೭೪೧೧೧ ಕ್ಕೆ ಸಂಪರ್ಕಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply