ಬೆಳಗಾವಿ, ಏ.೨೧ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಮತದಾರರ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವ ಉಳಿಯಲು ಮತದಾನ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಸಹಾಯಕ ನಿರ್ದೇಶಕ ಲಿಂಗರಾಜ ಹಲಕರ್ಣಿಮಠ ಹೇಳಿದರು.
ತಾಲೂಕಿನ ಬೈಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮತದಾನ ಮತದಾನ ಜಾಗೃತಿಯ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ರಾಷ್ಟö್ರದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಮತವೂ ಪವಿತ್ರವಾದುದು. ಯಾವುದೇ ಆಮಿಷಗಳಿಗೆ ಒಳಗಾಗದೆ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಿ ನಿಮ್ಮ ಹಕ್ಕನ್ನು ನೀವು ಚಲಾಯಿಸಿ ಎಂದರು.
ಐಇಸಿ ಸಂಯೋಜಕಿ ಎಸ್ ಬಿ ಜವಳಿ, ಬಿಎಫ್ ಟಿ ಸದ್ದಾಂ ದಾದೆಬಾಯಿ, ಜಗದೀಶ್ ಅಂಗಡಿ, ಗ್ರಾಮ ಕಾಯಕಮಿತ್ರ ಶೈಲಾ ಅಂಗಡಿ , ಡಿಇಓ ನಾಗಪ್ಪ ಇಟ್ನಾಳ ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.
Gadi Kannadiga > Local News > ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಮಹತ್ವದ್ದಾಗಿದೆ ಲಿಂಗರಾಜ ಹಲಕರ್ಣಿಮಠ
ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಮಹತ್ವದ್ದಾಗಿದೆ ಲಿಂಗರಾಜ ಹಲಕರ್ಣಿಮಠ
Suresh21/04/2023
posted on
