ಬಳ್ಳಾರಿ, ನ.೧೭: ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಕೆಕೆಆರ್ಡಿಬಿಯ ೫೦ ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಹಿರಿಯ ಪ್ರಾಥಮಿಕ ಶಾಲೆಯ ೫ ಕೊಠಡಿಗಳ ಕಟ್ಟಡವನ್ನು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ದೇಶದ ಅಭಿವದ್ಧಿ ಸಾಧ್ಯ ಈ ಉದ್ದೇಶದಿಂದಲೇ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆಂದರು.ಗ್ರಾಮೀಣ ಪ್ರದೇಶದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೊಳವೆ ಬಾವಿ ಹಾಗೂ ಉತ್ತಮ ಶೌಚಾಲಯಗಳ ನಿರ್ಮಾಣಕ್ಕಾಗಿ ಸರಕಾರದಿಂದ ಹೆಚ್ಚು ಅನುದಾನ ತರಲು ಪ್ರಯತ್ನಿಸುತ್ತೇನೆಂದರು.ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣ ಅತ್ಯವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದುಅವಶ್ಯವಾಗಿದೆ. ವಸತಿ ಸೌಲಭ್ಯದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಸರಕಾರ ನೂತವಾಗಿ ವಿದ್ಯಾಸಿರಿ ಯೋಜನೆ ಜಾರಿಗೆ ತಂದಿದೆ. ಅಲ್ಲದೇ ಹೋಬಳಿಗೊಂದು ವಸತಿ ಶಾಲೆ ಪ್ರಾರಂಭಿಸಲು ಸರಕಾರ ಚಿಂತನೆ ನಡೆಸಿದೆ. ಇದರಿಂದ ಗ್ರಾಮೀಣ ಪ್ರದೇಶಗಳ ಬಡ ವಿದ್ಯಾರ್ಥಿಗಳಿಗೆ ಸಾಕಷ್ಟು ಸಹಾಯವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಕಮ್ಮರಚೇಡು ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಶಾಲೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
Gadi Kannadiga > State > ೫೦ ಲಕ್ಷ ರೂ ವೆಚ್ಚದ ಹಿರಿಯ ಪ್ರಾಥಮಿಕ ಶಾಲೆಯ ೫ ಕೊಠಡಿಗಳ ಕಟ್ಟಡವನ್ನು ಉದ್ಘಾಟಿಸಿದ ಗ್ರಾಮೀಣ ಶಾಸಕ ಬಿ.ನಾಗೇಂದ್ರ
೫೦ ಲಕ್ಷ ರೂ ವೆಚ್ಚದ ಹಿರಿಯ ಪ್ರಾಥಮಿಕ ಶಾಲೆಯ ೫ ಕೊಠಡಿಗಳ ಕಟ್ಟಡವನ್ನು ಉದ್ಘಾಟಿಸಿದ ಗ್ರಾಮೀಣ ಶಾಸಕ ಬಿ.ನಾಗೇಂದ್ರ
Suresh17/11/2022
posted on
