This is the title of the web page
This is the title of the web page

Please assign a menu to the primary menu location under menu

State

ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ bಟಿಗ್ರಾಮೀಣ ಬಡತನ ನಿವಾರಣಾ ಯೋಜನೆ ಅತ್ಯಂತ ಪ್ರಮುಖವಾಗಿದೆ


ಗದಗ ಸೆಪ್ಟೆಂಬರ್ ೨೮: ಗ್ರಾಮೀಣ ಪ್ರದೇಶದಲ್ಲಿರುವ ಬಡತನದ ತೀವ್ರತೆಯನ್ನು ಕಡಿಮೆಗೊಳಿಸುವ ಉದ್ದೇಶದೊಂದಿಗೆ ಸಂಜೀವಿನಿ-ಡೇ-ಎನ್.ಆರ್.ಎಲ್.ಎಂ ಯೋಜನೆಯನ್ನು ಜಿಲ್ಲೆಯಲ್ಲಿ ೨೦೧೩-೧೪ ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸ್ವ-ಸಹಾಯ ಗುಂಪುಗಳ ವ್ಯಾಪ್ತಿಗೆ ತಂದು ವಾರ್ಡ್ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ಒಕ್ಕೂಟಗಳನ್ನು ರಚಿಸುವ ಮುಖೇನ ಮಹಿಳೆಯರಿಗೆ ಸಾಂಸ್ಥಿಕ ಬೆಂಬಲ ನೀಡಲಾಗುತ್ತಿದೆ. ಒಕ್ಕೂಟಗಳ ನಿರ್ವಹಣೆಯ ಜವಾಬ್ದಾರಿಯನ್ನು ಸ್ವ ಸಹಾಯ ಗುಂಪಿನ ಮಹಿಳೆಯರೇ ವಹಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿರುವುದು ಗಮನಾರ್ಹ ವಿಷಯವಾಗಿದೆ. ಸ್ವ-ಸಹಾಯ ಗುಂಪುಗಳ ಹಾಗೂ ಒಕ್ಕೂಟಗಳ ಸುಸ್ಥಿರ ಸಂಸ್ಥೆಗಳನ್ನಾಗಿ ರೂಪಿಸುವ ಉದ್ದೇಶದಿಂದ ಸಂಜೀವಿನಿ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಹಲವಾರು ಸಾಮರ್ಥ್ಯ ಬಲವರ್ಧನಾ ತರಬೇತಿಗಳನ್ನು ನೀಡಲಾಗುತ್ತಿದೆ. ಅದರನ್ವಯ ನಮ್ಮ ಗ್ರಾಮ ನಮ್ಮ ಯೋಜನೆಗೆ ಗ್ರಾಮೀಣ ಬಡತನ ನಿವಾರಣಾ ಯೋಜನೆ ಅಳವಡಿಸುವುದರ ಕುರಿತಂತೆ ಸೆಪ್ಟೆಂಬರ್ ೧೨ ರಿಂದ ೨೩ ರವರೆಗೆ ವಿವಿಧ ಬ್ಯಾಚ್‌ಗಳಲ್ಲಿ ಒಟ್ಟು ೪೩೮ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಎಂ. ಅವರು ಸದರಿ ತರಬೇತಿಗೆ ಸೆಪ್ಟೆಂಬರ್ ೨೩ರಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರೊಟ್ಟಿಗೆ ಭೇಟಿ ನೀಡಿ, ಶಿಬಿರಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿ, ಶಿಬಿರಾರ್ಥಿಗಳು ಕಲಿತುಕೊಂಡ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ ಅವರು ನಮ್ಮ ಗ್ರಾಮ ನಮ್ಮ ಯೋಜನೆ” ಸಿದ್ಧಗೊಳ್ಳುವಿಕೆಯಲ್ಲಿ “ಗ್ರಾಮೀಣ ಬಡತನ ನಿವಾರಣೆ ಯೋಜನೆ” ಅತ್ಯಂತ ಪ್ರಮುಖವಾಗಿದ್ದು, ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸ್ವ ಸಹಾಯ ಗುಂಪಿನ ಮಹಿಳೆಯರೊಟ್ಟಿಗೆ ಸಮರ್ಪಕ ಚರ್ಚೆಗಳನ್ನು ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಹಾಗೂ ಗ್ರಾಮದ ಸಮಸ್ಯೆಗಳನ್ನು ಯೊಜನೆಯಲ್ಲಿ ಸೇರಿಸಿ ಗ್ರಾಮೀಣಾಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖಾ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಹಾಗೂ ಸಂಜೀವಿನಿ ಸಿಬ್ಬಂದಿಗಳು ಹಾಜರಿದ್ದರು. ಸಂಜೀವಿನಿ ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಹಾಜರಿದ್ದು, ಶಿಭಿರಾರ್ಥಿ ಹಾಗೂ ಅಧಿಕಾರಿಗಳ ಮುಕ್ತ ಚರ್ಚೆಗೆ ಅವಕಾಶ ಕಲ್ಪಿಸಿದರು.


Gadi Kannadiga

Leave a Reply