ಕೊಪ್ಪಳ ನವೆಂಬರ್ ೨೨ : ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ ೨೦೧೧ರ ಸಮರ್ಪಕ ಅನುಷ್ಠಾನದ ಕುರಿತಂತೆ ಪರಿಶೀಲನೆ ನಡೆಸಲು ಹಾಗೂ ಸಾರ್ವಜನಿಕ ಕುಂದುಕೊರತೆ ಐಪಿಜಿಆರ್ಎಸ್ ಪ್ರಗತಿ ಪರಿಶೀಲನಾ ಬಗ್ಗೆ ನವೆಂಬರ್ ೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಿಕೊಳ್ಳುವರು. ಆದ್ದರಿಂದ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೨೮ ರಂದು ಸಕಾಲ ಹಾಗೂ ಐಪಿಜಿಆರ್ಎಸ್ ಪ್ರಗತಿ ಪರಿಶೀಲನಾ ಸಭೆ