ಬೆಳಗಾವಿ ಅ.೦೭: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ:೦೯/೧೦/೨೦೨೨ ರಂದು ಬೆಳಿಗ್ಗೆ ೦೬ ಗಂಟೆಯಿಂದ ರಾತ್ರಿ ೨೪೦೦ ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್ಗಳಲ್ಲಿ, ಕ್ಲಬ್ಗಳಲ್ಲಿ ಮತ್ತು ಹೊಟೇಲ್ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್ಬಿಸಿಎಲ್ ಡಿಪೋಗಳನ್ನು, ಹೊಟೇಲ್ಗಳಲ್ಲಿರುವ ಬಾರ್ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು, ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧(೨) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ಕಲಂ ೩೧ ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಅಬಕಾರಿ ಉಪ ಆಯುಕ್ತರು, ಬೆಳಗಾವಿ ತಾಲೂಕ ಮತ್ತು ಉಪ ಪೊಲೀಸ್ ಆಯುಕ್ತರು (ಕಾ&ಸು) ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಬೆಳಗಾವಿ ಮತ್ತು ಅಬಕಾರಿ ಉಪ-ಅಧೀಕ್ಷಕರು, ಬೆಳಗಾವಿ ಇವರುಗಳು ತಮ್ಮ ವ್ಯಾಪ್ತಿಯಲ್ಲಿ ಈ ಅಧಿಸೂಚನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸತಕ್ಕದ್ದು. ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ. ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಈದ-ಇ-ಮಿಲಾದ ಹಬ್ಬ ಹಾಗೂ ವಾಲ್ಮಿಕಿ ಜಯಂತಿ: ಅ.೦೯ ರಂದು ಮದ್ಯ ಮಾರಾಟ ನಿಷೇದ