This is the title of the web page
This is the title of the web page

Please assign a menu to the primary menu location under menu

Local NewsState

ಸ್ವಗ್ರಾಮ ತಲುಪಿದ ಸಂತೋಷ್ ಪಾಟೀಲ್ ಮೃತದೇಹ : ಕುಟುಂಬಸ್ಥರ ಆಕ್ರಂದನ


ಬೆಳಗಾವಿ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರ ಇಂದು ತಾಲೂಕಿನ ಬಡಸ ಗ್ರಾಮಕ್ಕೆ ತಲುಪಿದೆ.ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.

ಉಡುಪಿಯಿಂದ ಮೃತದೇಹದೊಂದಿಗೆ ಬಂದಿದ್ದ ಮೃತನ ಸಹೋದರ ಬಸವನಗೌಡ ಪೊಲೀಸ್ ಆಯುಕ್ತರ ಕಚೇರಿಗೆ ಮೃತದೇಹ ಕೊಂಡೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಹೂಟ್ಟೂರು ಬಡಸ ಗ್ರಾಮಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗಿದೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಆರೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ನಿನ್ನೆ ಮಣಿಪಾಲ ಫಾರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಹಸ್ತಾಂತರ ಮಾಡಲಾಯಿತು. ಬಳಿಕ ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಯ ಬಡಸ ಗ್ರಾಮಕ್ಕೆ ರವಾನೆ ಮಾಡಲಾಗಿದೆ.


Leave a Reply