ಬೆಳಗಾವಿ :ಸಚಿವ ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆಂದು ಕಮಿಷನ್ ಆರೋಪ ವಿಚಾರವಾಗಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಉಡುಪಿಯ ಲಾಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಧ್ಯಮ ಪ್ರತಿನಿಧಿಗಳ ಮೊಬೈಲ್ಗೆ ಡೆತ್ನೋಟ್ ವಾಟ್ಸಪ್ ಮೆಸೇಜ್ ಕಳಿಸಿ ನಾಪತ್ತೆ ಆಗಿದ್ದ ಸಂತೋಷ ಪಾಟೀಲ,’ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ’ ಎಂದು ವಾಟ್ಸಪ್ ಮೆಸೇಜ್ ಕಳಿಸಿ ನಾಪತ್ತೆ ಆಗಿದ್ದ ಡೆತ್ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಮುಂದಾದ ಪೊಲೀಸರು ವ್ಯಾಪಕ ಶೋಧ ನಡೆಸಿದ್ದರು.
ಗುತ್ತಿಗೆದಾರ ಸಂತೋಷ ಪಾಟೀಲ್ ಮೊಬೈಲ್ ಉಡುಪಿಯಲ್ಲಿ ಆ್ಯಕ್ಟೀವ್ ಎಂಬ ಮಾಹಿತಿ ಸಿಕ್ಕಿತ್ತು.ಬೆಳಗಾವಿಯ ಸಂತೋಷ ಪಾಟೀಲ್ ನಿವಾಸಕ್ಕೆ ಲಾಕ್ ಹಾಕಲಾಗಿತ್ತು.ಹಿಂಡಲಗಾ ಸಮರ್ಥ ಕಾಲೋನಿಯ ನಿವಾಸ ಲಾಕ್ ಹಾಕಲಾಗಿತ್ತು ಒಂದು ವಾರದಿಂದ ಮನೆಗೆ ಲಾಕ್ ಇದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದರು.