ಬೆಳಗಾವಿ: ಕಿಡಿಗೇಡಿಗಳು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರಲು ಯತ್ನಿಸಿರುವ ಆರೋಪ ಕೇಳಿಬಂದಿದೆ.
ಅಶ್ಲೀಲ ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋಗಳ ಪೋಸ್ಟ್ನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯ ಎಸೆಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ