This is the title of the web page
This is the title of the web page

Please assign a menu to the primary menu location under menu

Local News

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ


ಗೋಕಾಕ-16: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ.

ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ. ಆದರೆ ಕಾಂಗ್ರೆಸ್‌ ನಾಯಕರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಬಿಜೆಪಿಯವರು ಎಷ್ಟೇ ಹೆದರಿಸಲು ಪ್ರಯತ್ನ ಪಟ್ಟರೂ ನಾವು ಅದಕ್ಕೆ ಹೆದರುವುದಿಲ್ಲ. ಎಲ್ಲಾ ಸಮಸ್ಯೆಗಳಿಗೆ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ ಎಂದ ತಿಳಿಸಿದರು.


Gadi Kannadiga

Leave a Reply