ಬೆಳಗಾವಿ: ಬಿಜೆಪಿ ಸರಕಾರ 40 ಪರ್ಸೆಂಟ್ ಕಮಿಷನ್ ಸರಕಾರ ಎಂದು ಸಾಬೀತಾಗಿದೆ. ಸಚಿವ ಈಶ್ವರಪ್ಪ ವಿರುದ್ಧ ಏಪ್.ಐ. ಆರ್ ದಾಖಲಾಗಿ ಸೂಕ್ತ ತನಿಖೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಬಿಜೆಪಿ ವಿರುದ್ಧ ಬೆಳಗಾವಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಟ್ರೆಕ್ಟರ್ ಅಸೋಸಿಯೇಷನ್ ಬಳಿಕ ಅವರದೇ ಪಕ್ಷದ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಪಾಟೀಲ್ 40 ಪರ್ಸೆಂಟ್ ಆರೋಪ ಮಾಡಿದ್ದಾರೆ. ಸಂತೋಷ ರೀತಿಯಲ್ಲಿ ಅನ್ಯಾಯಕ್ಕೆ ಒಳಗಾದವರು ಮುಂದೆ ಬಂದು ಕೇಸ್ ದಾಖಲಿಸಿ ನ್ಯಾಯ ಪಡೆದುಕೊಳ್ಳುವ ಕೆಲಸ ಮಾಡಬೇಕು ಎಂದರು.
ಸಚಿವ ಈಶ್ವರಪ್ಪ ಮೇಲೆ ಖಂಡಿತವಾಗಿ ಎಫ್.ಐ.ಆರ್ ಆಗುತ್ತದೆ ಬಳಿಕ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರ ಮೃತ ಸಂತೋಷಗೆ ಕೆಲಸ ಮಾಡಲು ಯಾರು ಹೇಳಿದ್ದಾರೆ ಎಂದು ತನಿಖೆಯ ನಂತರವೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬೆಳಗಾವಿ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.