ಬೆಳಗಾವಿ, ಜ.೨೭ : ಜನವರಿ ೨೮ ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ನಡೆಯಲಿದೆ.
ಅಂದು ಬೆಳ್ಳಿಗೆ ೯.೩೦ ಕ್ಕೆ ಸವಿತಾ ಮಹರ್ಷಿಯವರ ಭಾವ ಚಿತ್ರದ ಭವ್ಯ ಮೆರವಣಿಗೆ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾ ಮಂದಿರದ ವರಗೆ ನಡೆಯಲಿದ್ದು, ೧೧ ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಜಲ ಸಂಪನ್ಮೂಲ, ಭಾರಿ ಮತ್ತು ಮಧ್ಯಮ ನೀರಾವರಿ, ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಜರಾಯಿ ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಾಗೂ ವಿಧಾನ ಸಭೆ ಶಾಸಕರಾದ ಅನಿಲ ಎಸ್. ಬೆನಕೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಾಗೂ ಮತ್ತಿತರ ಗಣ್ಯರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಇವರು ತಿಳಿಸಿದ್ದಾರೆ.
Gadi Kannadiga > Local News > ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ