ಕೊಪ್ಪಳ ಫೆಬ್ರವರಿ ೦೭ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಸರ್ಕಾರವು ೨೦೨೨-೨೩ ನೇ ಸಾಲಿನ ಪೂರಕ ಆಯವ್ಯಯದ ಒದಗಿಸಿದ ಅನುದಾನದಲ್ಲಿ ಗಂಗಾ ಕಲ್ಯಾಣ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಹಾಗೂ ಹಾಲಿ ಜಮೀನುಗಳು ಖುಷ್ಕಿಯಾಗಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ ೨.೫೦ ಲಕ್ಷಗಳು, ಇದರಲ್ಲಿ ರೂ ೨ ಲಕ್ಷ ಸಹಾಯಧನ ಹಾಗೂ ರೂ ೫೦,೦೦೦ ನಿಗಮದಿಂದ ಶೇ.೪ ರ ಬಡ್ಡಿದರಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇದವರಿಗೆ ರೂ ೯೮,೦೦೦ ಹಾಗೂ ಪಟ್ಟಣ ಪ್ರದೇಶದವರಿಗೆ ರೂ ೧,೨೦,೦೦೦ ಗಳ ಒಳಗಿರಬೇಕು. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಆರ್ಡನಲ್ಲಿರುವಂತೆ ರೈತರ ಹೆಸರು, (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಅಡಿಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-೨ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಿ.ಇ.ಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ವಯಸ್ಸು ೧೮ ರಿಂದ ೩೫ ವರ್ಷಗಳ ಒಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ೩,೫೦,೦೦೦ ರೂ.ಗಳ ಒಳಗಿರಬೇಕು. ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ವಿದ್ಯಾರ್ಥಿಗಳ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು), ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಗಂಗಾ ಕಲ್ಯಾಣ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಈ ಎರಡು ಯೋಜನೆಗಳಲ್ಲಿ ಅರ್ಜಿದಾರರು, ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ ೦೩ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿದಾರರು ಅಥವಾ ವಿದ್ಯಾರ್ಥಿಗಳು ಈ ಹಿಂದೆ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ hಣಣಠಿ://ಞssಜ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದಾಗಿದೆ. ದೂರವಾಣೆ ಸಂಖ್ಯೆ: ೦೮೫೩೯-೨೨೧೮೪೭ ಗೆ ಬೆಳಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ