ಗದಗ ಅಕ್ಟೋಬರ್ ೨೧: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧವನ್ನು ನವೆಂಬರ್ ೨೨ ರವರೆಗೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.
೭ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು
ಗದಗ ಅಕ್ಟೋಬರ್ ೨೧: ಅಕ್ಟೋಬರ್ ೨೩ ರಂದು ಧನ್ವಂತರಿ ದಿನಾಚರಣೆ ಪ್ರಯಕ್ತವಾಗಿ ೭ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಮನೆ ಮನೆಯಲ್ಲಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.
ರಾಷ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದ ಮುನ್ನಾದಿನವಾಗಿ ಅಕ್ಟೋಬರ್ ೨೨ ರಂದು ಮುಂಜಾನೆ ೯ ಗಂಟೆಗೆ ಮುನಸಿಪಲ್ ಕಾಲೇಜು ಆವರಣದಿಂದ ಜಾಥಾ ಕಾರ್ಯಕ್ರಮವನ್ನು ನಿಮಾ& ಖಾಸಗಿ ವೈದ್ಯಕೀಯ ಸೇವಾ ಸಂಸ್ಥೆಗಳು ಹಾಗೂ ಜಿಲ್ಲೆಯಲ್ಲಿನ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಗಳ ಸಹಯೋಗದೊಂದಿಗೆ ಎರ್ಪಡಿಸಲಾಗಿದೆ.
ಅಕ್ಟೋಬರ್ ೨೩ ರಂದು ಮುಂಜಾನೆ ೧೦ ಗಂಟೆಗೆ ಬೆಂಗಳೂರು ಆಯುಷ್ ನಿರ್ದೇಶನಾಲಯ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಆಯುಷ್ ಇಲಾಖೆಯಿಂದ ನಗರದ ತೋಂಟದಾರ್ಯ ಕಲ್ಯಾಣ ಮಂಟಪ ದಲ್ಲಿ ರಾಷ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉದ್ಘಾಟನೆ ಕಾರ್ಯಕ್ರಮದ ನಂತರ ಜಿಲ್ಲೆಯಲ್ಲಿನ ಹಿರಿಯ ನಾಗಿಕರಿಗಾಗಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಎರ್ಪಡಿಸಲಾಗಿದೆ. ಸದರಿ ಕಾರ್ಯಕ್ರಮದ ಹಾಗೂ ಉಚಿತ ಚಿಕಿತ್ಸಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಎಸ್ ಉಪ್ಪಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜಾನುವಾರುಗಳಿಗೆ ಚರ್ಮಗಂಟು ರೋಗ : ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧ