ಕೊಪ್ಪಳ ಆಗಸ್ಟ್ 02 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಕೊಪ್ಪಳ ವತಿಯಿಂದ ಆಗಸ್ಟ್ 06ರವರಗೆ ನಡೆಯಲಿರುವ ವಿಭಾಗೀಯ ಮಟ್ಟದ ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್ ರವರ ಮೂಲ ತರಬೇತಿ ಶಿಬಿರವು ಗುನ್ನಳ್ಳಿಯ ಕೊಪ್ಪಳ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಇತ್ತೀಚೆಗೆ ನಡೆಯಿತು.
ಈ ಕಾರ್ಯಕ್ರಮದಲ್ಲಿ
ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರ್ಗಿ, ವಿಜಯನಗರ, ಯಾದಗಿರಿ ಜಿಲ್ಲೆಗಳು ಒಳಗೊಂಡ ವಿಭಾಗೀಯ ಮಟ್ಟದ ಸ್ಕೌಟ್ಸ್ ವಿಭಾಗದ ನಾಯಕರು, ನಾಯಕಿಯರು, ಸಹಾಯಕರು ಹಾಗೂ ಜಿಲ್ಲಾ ಸಂಸ್ಥೆಯ ಸರ್ವ ಪದಾಧಿಕಾರಿಗಳು ಹಾಗೂ 123 ಸ್ಕೌಟ್ ಮಾಸ್ಟರ್, 89 ಗೈಡ್ ಕ್ಯಾಪ್ಟನ್, ಎ.ಎಸ್.ಓ.ಸಿ., ಎಸ್.ಜಿ.ವಿ ಎಸ್.ಎಮ್.ಸಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯ ಅವರ ಅಧ್ಯಕ್ಷತೆಯಲ್ಲಿ
ತರಬೇತಿ ಶಿಬಿರ ನಡೆಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಮುಖ್ಯ ಆಯುಕ್ತರಾದ ಸಿದ್ದರಾಮಸ್ವಾಮಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಆಯುಕ್ತರಾದ ಸಿ.ಬಿ ಪಾಟೀಲ್ ಓಕ್ಲೇ, ಜಿಲ್ಲಾ ಆಯುಕ್ತರಾದ ಅರುಣಾ ವಸ್ತ್ರದ, ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತರು ಹಾಗೂ ಎ.ಎಸ್.ಓ.ಸಿ, ರೇಂಜರಿಂಗ್ ವಿಭಾಗದ ಕಲ್ಯಾಣ ಕರ್ನಾಟಕ ಉಸ್ತುವಾರಿ ಶಿಬಿರದ ಮೇಲ್ವಿಚಾರಕರಾದ ಮಲ್ಲೇಶ್ವರಿ ಜೂಜರೇ, ಕೊಪ್ಪಳ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಮಲ್ಲಪ್ಪ ಗುಡದಣ್ಣನವರ್, ಜಿಲ್ಲಾ ಸಹಾಯಕ ಕಾರ್ಯದರ್ಶಿಗಳಾದ ಪ್ರಭಾಕರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಗಳಾದ ಮಾರುತಿ ಆರೇರ ಸ್ವಾಗತಿಸಿದರು. ಸಂಸ್ಥೆಯ ಜಿಲ್ಲಾ ಆಯುಕ್ತರಾದ ಮಲ್ಲಿಕಾರ್ಜುನ ಚೌಕಿಮಠ ವಂದಿಸಿದರು.
Gadi Kannadiga > State > ಕೊಪ್ಪಳದಲ್ಲಿ ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಮೂಲ ತರಬೇತಿ ಶಿಬಿರ
ಕೊಪ್ಪಳದಲ್ಲಿ ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಮೂಲ ತರಬೇತಿ ಶಿಬಿರ
sharanappa02/08/2023
posted on
