ಕೊಪ್ಪಳ ನವೆಂಬರ್ ೨೨ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ(ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ ೨೦೧೩ ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯನ್ನು ನವೆಂಬರ್ ೨೮ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಲಿದ್ದು, ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ೨೦೨೧-೨೨ನೇ ಸಾಲಿನ ಅಕ್ಟೋಬರ್-೨೦೨೨ ರ ಅಂತ್ಯದವರೆಗಿನ ಸಂಪೂರ್ಣ ಪ್ರಗತಿ ವರದಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆ ಅಧಿನಿಯಮ ೨೦೧೩ರ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ನ.೨೮ ರಂದು ಎಸ್ಸಿಪಿ & ಟಿಎಸ್ಪಿ ಸಭೆ
More important news
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023
ತರಬೇತಿ ಶಿಬಿರ
27/01/2023
ಶ್ರೀ ಸವಿತಾ ಮಹರ್ಷಿ ಜಯಂತಿ
27/01/2023
ವಿದ್ಯುತ್ ಸರಬರಾಜು ವೇಳೆಯಲ್ಲಿ ಬದಲಾವಣೆ
27/01/2023