ಬೆಳಗಾವಿ : ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ 144 ಕಲಂ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ನಿಷೇಧಾಜ್ಞೆ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ಯಾವುದೇ ರೀತಿಯ ಮಾರಕ, ಸ್ಫೋಟಕ ವಸ್ತುಗಳನ್ನು ಹೊತ್ತೊಯ್ಯಲು, ಮೆರವಣ ಗೆ ನಡೆಸಲು ಅನುಮತಿ ಇಲ್ಲ. ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.