ಕುಷ್ಟಗಿ:-ದಿ.6-8-2025 ರಂದು ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಮಗೇರಾದಲ್ಲಿ ನೂತನ ಎಸ್ ಡಿ ಎಂ ಸಿ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನೂತನ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಾಜಾ ಸಾಬ್ ಡಿ ಬಾವಿಕಟ್ಟಿ ಹಾಗೂ ಉಪಾಧ್ಯಕ್ಷರಾಗಿ ಪರಮೇಶ್ ಡಿ ಗುಂಟಮಡುವು ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಆಡಳಿತ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪರಸಪ್ಪ ಗಂಗನಾಳ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಮಾಜಿ ಎಸ್ ಡಿ ಎಮ್ ಸಿ ಅಧ್ಯಕ್ಷರುಗಳು, ಪಾಲಕರು ಊರಿನ ಗುರುಹಿರಿಯರು ಉಪಸ್ಥಿತರಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ