This is the title of the web page
This is the title of the web page

Please assign a menu to the primary menu location under menu

State

ಹಿರಿಯ ನಾಗರಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡು ಉತ್ತಮ ಜೀವನ ಸಾಗಿಸಬೇಕು


ಗದಗ ಸೆಪ್ಟೆಂಬರ್ ೨೬: ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿಕೊಂಡು ಉತ್ತಮ ಜೀವನ ಸಾಗಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ತಿಳಿಸಿದರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಗದಗ ಜಿಲ್ಲೆಯ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ನಿರ್ಣಾಯಕರ ತೀರ್ಪುಗಳನ್ನು ಸ್ವೀಕರಿಸಬೇಕು. ಇಲಾಖೆಯ ವಿವಿಧ ಸೌಲಭ್ಯಗಳನ್ನು ಹಿರಿಯ ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಹಿರಿಯ ನಾಗರಿಕರ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಎಚ್.ಬೇಲೂರು ಹಾಗೂ ಬಿ.ಬಿ. ಹೂಗಾರ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಕೆ.ಎಚ್.ಬೇಲೂರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಿ.ಬಿ. ಹೂಗಾರ, ಜಿಲ್ಲಾ ನಿವೃತ್ತ ನೌಕರರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಬಿ.ಎಂ. ಬಿಳೆ ಎಲಿ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಉಪ ಸಮಿತಿ ಅಧ್ಯಕ್ಷರಾದ ಜಿ.ಎಸ್. ಹಿರೇಮಠ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಮುಖ್ಯಸ್ಥರು, ಜಿಲ್ಲೆಯ ಎಮ್.ಆರ್. ಡಬ್ಲೂö್ಯ , ರಾಜ್ಯ ಹಾಗೂ ಕೇಂದ್ರ ಹಿರಿಯ ನಾಗರಿಕರ ಸಹಾಯವಾಣೀ ಕೇಂದ್ರದ ಸಿಬ್ಬಂದಿಗಳು , ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೆಂದ್ರದ ಸಿಬ್ಬಂದಿಗಳು, ಹಿರಿಯ ನಾಗರಿಕರ ವೃದ್ಧಾಶ್ರಮ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೆ. ಮಹಾಂತೇಶ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ್ ಶೆಟ್ಟಪ್ಪನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಪ್ರಕಾಶ ಗಾಣಿಗೇರ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ವಾಗ್ದೇವಿ ಕುಲಕರ್ಣಿ ಪ್ರಾರ್ಥಿಸಿದರು.


Gadi Kannadiga

Leave a Reply