ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ : ಶಾಂತಮಲ್ಲಶ್ರೀ

Murugesh Shivapuji
ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ : ಶಾಂತಮಲ್ಲಶ್ರೀ
WhatsApp Group Join Now

ಸಿರವಾರ : ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗಿ, ಪ್ರಗತಿಗೆ ಪೂರಕವಾಗುತ್ತದೆ ಎಂದು ೧೦೮ ಸಾವಿರ ದೇವರ ಸಂಸ್ಥಾನ ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ನವಲಕಲ್ಲು ಬೃಹನ್ಮಠದ ಲಿಂ.ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ೨೮ ನೇ ಜಾತ್ರ ಮಹೋತ್ಸವ ಮಯೂರಶಿಲೆ ನಾಡೋತ್ಸವ-೨೦೨೫ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ. ಇದಕ್ಕಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ. ಸಾಮೂಹಿಕ ವಿವಾಹದಲ್ಲಿಸಂಸಾರ ಜೀವನಕ್ಕೆ ಪಾದಾರ್ಪಣೆ ಆದರ್ಶ. ಇದು, ಕುಟುಂಬಕ್ಕೆ ಮಾತ್ರವಲ್ಲದೇ ದೇಶದ ಅಭಿವೃದ್ಧ್ದಿಗೂ ಸಹಕಾರಿಯಾಗುತ್ತದೆ. ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶಿರ್ವಾದದೊಂದಿಗೆ ಸಾಮೂಹಿಕ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ. ನೂತನ ವಧು-ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ಮಾಡುವುದರ ಮೂಲಕ ಸಮಾಜಕ್ಕೆ ಮಾದರಿಉಯಾಗಬೇಕು ಎಂದರು.
ಸಾಮೂಹಿಕ ವಿವಾಹದಲ್ಲಿ ೪೦ ಕ್ಕೂ ಹೆಚ್ಚು ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಜಾಲಹಳ್ಳಿಯ ಜಯಶಾಂತಲಿAಗ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಬಬಲಾದ ಹಾಗೂ ದೇವಾಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಾಯಚೂರು ಸೋಮವಾರ ಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಮಸ್ಕಿಯ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ರೇಣುಕ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ದೇವರಭೂಪುರ ಬೃಹನ್ಮಠದ ಅಭಿನವ ಗಜದಂಡ ಶಿವಾಚಾರ್ಯ ಸ್ವಾಮೀಜಿ, ಸುಲ್ತಾನಪೂರದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಯರಡೋಣಿಯ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರಪೇಟೆಯ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ಜ್ಯೋತಿ ಅಕ್ಕ, ಅಂಕಲಿಮಠದ ವೀರಭದ್ರ ಮಹಾಸ್ವಾಮಿಗಳು, ಜಾಗಟಗಲ್ ಬೆಟ್ಟಪ್ಪ ತಾತನವರು, ಬಲ್ಲಟಗಿಯ ಗುರುಬಸವ ಸ್ವಾಮಿಗಳು, ಬಸಯ್ಯ ಸ್ವಾಮಿಗಳು, ಯರಮರಸ್ ಚರಬಸವ ಸ್ವಾಮಿಗಳು, ಹೀರಾ ಅಯ್ಯಪ್ಪ ತಾತ, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ಚುಕ್ಕಿ ಸೂಗಪ್ಪ ಸಾಹುಕಾರ, ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ವೈ.ಅಮರೇಶಪ್ಪಗೌಡ, ಜೆ.ದೇವರಾಜಗೌಡ ಇತರರು ಇದ್ದರು.
೦೭ ಎಸ್ವಿಆರ್ ೧
ಸಿರವಾರ ತಾಲೂಕಿನ ನವಲಕಲ್ಲು ಬೃಹನ್ಮಠದಲ್ಲಿ ಲಿಂ.ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ೨೮ ನೇ ಜಾತ್ರ ಮಹೋತ್ಸವ ಮಯೂರಶಿಲೆ ನಾಡೋತ್ಸವ-೨೦೨೫ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಜಾಲಹಳ್ಳಿ ಶ್ರೀಗಳು ಉದ್ಘಾಟಿಸುದರು.

WhatsApp Group Join Now
Telegram Group Join Now
Share This Article
error: Content is protected !!