ಕೊಪ್ಪಳ ಫೆಬ್ರವರಿ ೦೯ : ಜಿಲ್ಲೆಯ ಗಂಗಾವತಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಶಿಶಿಕ್ಷು (ಅಪ್ರೆಂಟಿಶಿಪ್) ಮೇಳವನ್ನು ಫೆಬ್ರವರಿ ೧೩ ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಶಿಶಿಕ್ಷು ಮೇಳವು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆನೆಗುಂದಿ ರಸ್ತೆ ಗಂಗಾವತಿ ಇಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ವಿವಿಧ ಕಾರ್ಖಾನೆಗಳಲ್ಲಿ ಶಿಶಿಕ್ಷು ತರಬೇತಿ ಪಡೆದು ಜೀವನವನ್ನು ಉಜ್ವಲಗೊಳಿಸಿಕೊಳ್ಳಬಹುದು. ಶಿಶಿಕ್ಷು ಮೇಳದ ಕುರಿತು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸ.ಕೈ.ತ.ಸಂಸ್ಥೆ ಗಂಗಾವತಿ ಮೊ.ಸಂ: ೯೪೪೮೨೫೯೮೩೨, ೯೯೭೨೦೪೫೫೧೯ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಫೆ.೧೩ ರಂದು ಗಂಗಾವತಿಯಲ್ಲಿ ಶಿಶಿಕ್ಷು ಮೇಳ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023