ಗದಗ ಜನೆವರಿ ೨೭: ಗದಗ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಸೃತಿ ಇಲಾಖೆಯಿಂದ ಶ್ರೀ ಸವಿತಾ ಮಹರ್ಷಿ ಜಯಂತಿ-೨೦೨೩ ನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಜನೆವರಿ ೨೮ ರಂದು ಬೆ. ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಕೃಷಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ಸಿ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಉಪಸ್ಥಿತಿ ವಹಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಶಾಸಕ ಎಚ್.ಕೆ.ಪಾಟೀಲ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್ ವಿ ಸಂಕನೂರ, ಪ್ರದೀಪ ಶೆಟ್ಟರ್, ಶಾಸಕರಾದ ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಎಂ.ಸಿ.ಎ ನಿಗಮದ ಅಧ್ಯಕ್ಷರಾದ ಎಂ.ಎಸ. ಕರಿಗೌಡ್ರ, ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ ಆಗಮಿಸುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮದ್ ಮೊಹಸಿನ್, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಾಬಾಸಾ¨ ನೇಮಗೌಡ ಸರ್ವರಿಗೂ ಸ್ವಾಗತ ಕೋರಿದ್ದಾರೆ.
Gadi Kannadiga > State > ಶ್ರೀ ಸವಿತಾ ಮಹರ್ಷಿ ಜಯಂತಿ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023