This is the title of the web page
This is the title of the web page

Please assign a menu to the primary menu location under menu

Local News

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ: ೩೮ ಶಾಲೆಗಳಿಗೆ “ಸ್ವಚ್ಛ ವಿದ್ಯಾಲಯ ಪುರಸ್ಕಾರ”


ಬೆಳಗಾವಿ,: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೧೨೫೬ ಶಾಲೆಗಳ ಪೈಕಿ ಸ್ವಚ್ಛತೆ ಹಾಗೂ ನೈರ್ಮಲ್ಯ ಅಭ್ಯಾಸ ಉತ್ತೇಜನಕ್ಕಾಗಿ ೩೮ ಶಾಲೆಗಳನ್ನು “ಸ್ವಚ್ಛ ವಿದ್ಯಾಲಯ ಪುರಸ್ಕಾರ”ಕ್ಕೆ ಆಯ್ಕೆ ಮಾಡಲಾಗಿದೆ.
ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಅಭ್ಯಾಸ ಉತ್ತೇಜನಕ್ಕಾಗಿ “ಸ್ವಚ್ಛ ವಿದ್ಯಾಲಯ ಪುರಸ್ಕಾರ” ಎಂಬ ಸ್ಪರ್ಧಾ ಯೋಜನೆಯನ್ನು ಯುನಿಸೆಫ್, ಕೇಂದ್ರ ಸರ್ಕಾರ, ಸಮಗ್ರ ಶಿಕ್ಷಣ ಕರ್ನಾಟಕ, ಮತ್ತು ಕೇಂದ್ರ ಪರಿಸರ ಶಿಕ್ಷಣ ಇಲಾಖೆಗಳು ಜಂಟಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿವೆ.
ಈ ಯೋಜನೆಯಡಿಯಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದು, ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ೧೨೫೬ ಶಾಲೆಗಳ ಪೈಕಿ ೩೮ ಶಾಲೆಗಳನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
ಗುರುವಾರ(ಜೂನ್ ೩೦) ರಂದು ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ವಿತರಣಾ ಸಮಾರಂಭವನ್ನು ಹಮ್ಮಿಕೊಂಡು ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ, ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ(ಆಡಳಿತ) ಎಂ.ಎಲ್.ಹಂಚಾಟೆ, ಡಿ.ವೈ.ಪಿ.ಸಿ. (ಆರ್.ಎಂಎ.ಸ್.ಎ) ದೀಪಕ ಕುಲಕರ್ಣಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಗೊಂಡ ೩೮ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಎಸ್.ಎಸ್.ಹಚ್ಚಡದ, ಎ.ಪಿ.ಸಿ ಅನಿತಾ ಪಾಟೀಲ, ಮತ್ತು ಚಿಕ್ಕೋಡಿ ಸಮಗ್ರ ಶಿಕ್ಷಣ ಕರ್ನಾಟಕದ ತಾಂತ್ರಿಕ ಸಹಾಯಕರಾದ ವಿಜಯಕುಮಾರ ಕುಂಬಾರ ಇತರರು ಉಪಸ್ಥಿತರಿದ್ದರು.


Gadi Kannadiga

Leave a Reply