ಕೊಪ್ಪಳ ಅಗಸ್ಟ್ 9, ಕೊಪ್ಪಳದಲ್ಲಿ ಕಳೆದ ಸುಮಾರು ಮೂರು ದಶಕದಿಂದ ಅಧಿಕೃತ ಪತ್ರಿಕೆ ಯ ವಿತರಕ ರಾಗಿ ಕಾರ್ಯನಿರ್ವಹಿಸುತ್ತಿರುವ ಕೊಪ್ಪಳದ ಮಹಿಬೂಬ್ ಮನಿಯಾರ್ ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ವಿಶೇಷ ಸನ್ಮಾನ ಮಾಡಿ ಸತ್ಕರಿಸಲಾಯಿತು.
ಶನಿವಾರ ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮಹಬೂಬ್ ಮನಿಯಾರ್ ರವರ ಪತ್ರಿಕಾ ವಿತರಣಾ ಸೇವೆ ಯನ್ನು ಪರಿಗಣಿಸಿ ಅವರಿಗೆ ಸನ್ಮಾನಿಸಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಶಾಸಕ ಕೆ ರಾಘವೇಂದ್ರ ಹಿಟ್ನಾಳ್, ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ್, ಜಿಲ್ಲಾ ಅಧ್ಯಕ್ಷ ಹನುಮಂತ ಹಳ್ಳಿಕೇರಿ ಜಿಲ್ಲಾ ಖಜಾಂಚಿ ರಾಜು ಬಿ ಆರ್, ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಸದಸ್ಯ ಎಚ್ಎಸ್ ಹರೀಶ್, ರಾಜ್ಯ ಸಮಿತಿ ಸದಸ್ಯ ಸಾಧಿಕ್ ಅಲಿ, ರಾಷ್ಟ್ರೀಯ ಮಂಡಳಿ ಸದಸ್ಯ ಜಿಎಸ್ ಗೋನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ್, ಗೌರವ ಅಧ್ಯಕ್ಷ ಬಸವರಾಜ ಗುಡ್ಲಾನೂರ್ ಪತ್ರಿಕಾ ಭವನ್ ಕಟ್ಟಡ ಸಮಿತಿ ಅಧ್ಯಕ್ಷ ಏನ್ ಎಂ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ವೀರಣ್ಣ ಕಳ್ಳಿಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಇನ್ನೂ ಹಲವರಿಗೆ ವಿಶೇಷ ಸನ್ಮಾನ ಮಾಡಲಾಯಿತು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ