This is the title of the web page
This is the title of the web page

Please assign a menu to the primary menu location under menu

State

ಸೆ. ೨೨ ರಂದು ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು


ಕೊಪ್ಪಳ, ಸೆ. ೨೧ : ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆ. ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿವರ :
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ನಿಮಿತ್ತ ಸೆ. ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿವರ ಇಂತಿವೆ. ೬೦ ರಿಂದ ೮೦ರ ವಯಸ್ಸಿನ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗಾಗಿ ಸಾಂಸ್ಕೃತಿಕ ಸ್ಪರ್ಧೆಗಳಾದ ಏಕ ಪಾತ್ರಾಭಿನಯ, ಗಾಯನ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳು ಮತ್ತು ಕ್ರೀಡಾ ಸ್ಪರ್ಧೆಗಳಾದ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು, ಮ್ಯೂಸಿಕಲ್ ಚರ‍್ಸ್ ಕ್ರೀಡೆಗಳು ನಡೆಯಲಿವೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಹಿರಿಯ ನಾಗರಿಕರು ತಮ್ಮ ಹಿರಿಯ ನಾಗರಿಕರ ಗುರುತಿನ ಚೀಟಿ ಹಾಗೂ ವಯಸ್ಸಿನ ದಾಖಲೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದವರಿಗೆ ಅಕ್ಟೋಬರ್ ೦೧ ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಸಾಂಸ್ಕೃತಿ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಅಥವಾ ದೂ.ಸಂ: ೦೮೫೩೯-೨೯೫೪೯೬ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply