This is the title of the web page
This is the title of the web page

Please assign a menu to the primary menu location under menu

State

ಶ್ರೀಕೃಷ್ಣ ಜಯಂತಿ: ಅಗತ್ಯ ಸಿದ್ಧತೆಗೆ ಸಲಹೆ


ಕೊಪ್ಪಳ ಸೆಪ್ಟೆಂಬರ್ ೦೨ : ಶ್ರೀಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗತ್ತಿ ಅವರು ಹೇಳಿದರು.
ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ ಕುರಿತಂತೆ ಸೆಪ್ಟೆಂಬರ್ ೦೧ರಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿಯ ವೇದಿಕೆಯ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೧ರ ಬೆಳಿಗ್ಗೆ ೧೧ಕ್ಕೆ ನಗರದ ಸಿರಸಪ್ಪಯ್ಯನ ಮಠದ ಓಣಿಯ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಅಚ್ಚುಕಟ್ಟಾಗಿ ಏರ್ಪಾಡು ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು, ಕಾರ್ಯಕ್ರಮವನ್ನು ಶಿಷ್ಠಾಚಾರ ಪಾಲನೆ ಜೊತೆಗೆ ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಏರ್ಪಾಡು ಮಾಡಬೇಕು ಎಂದು ತಿಳಿಸಿದರು.
ಶ್ರೀಕೃಷ್ಣ ಜಯಂತಿಯಲ್ಲಿ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿಗಳು ಸಭೆಯ ಮೂಲಕ ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಕೃಷಿ ಇಲಾಖೆಯ ಶಶಿಕಲಾ ಸವಣೂರು, ಸಮಾಜದ ಮುಖಂಡರಾದ ರಮೇಶ ಎನ್ ಯಾದವ್, ಜೆಪಿ ನಾರಾಯಣಗೌಡ ಯಾದವ್, ಬಿ.ವೆಂಕಣ್ಣ ಬಾಳಪ್ಪ, ಹೆಚ್.ಜಗನ್ನಾಥ ಯಾದವ್, ವೆಂಕಟೇಶ್ ಕಟ್ಟಿಮನಿ ಹಾಗೂ ಹಲವು ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply