ಬೆಳಗಾವಿ,ಮೇ.೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ, ಶುಕ್ರವಾರ (ಮೇ.೬) ಬೆಳಿಗ್ಗೆ ೧೧ ಗಂಟೆಗೆ ನಗರದ ಕಟ್ಟಿಮನಿ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಉತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಕಾರ್ಯಕ್ರಮ ಉದ್ಘಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಹಾಗೂ ಮುಜರಾಯಿ, ಹಾಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಭಾಗವಹಿಸಲಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕರಾದ ಅನೀಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಸಭಾಧ್ಯಕ್ಷರಾದ ವಿಶ್ವನಾಥ್ ಮಾಮನಿ, ಕರ್ನಾಟಕ ಕೊಳಗೇರಿ ಅಭವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲಾಧಿಕರಿ ಎಂ. ಜಿ ಹಿರೇಮಠ, ಪೊಲೀಸ್ ಆಯುಕ್ತರಾದ ಡಾ. ಎಂ. ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ದರ್ಶನ್ ಹೆಚ್. ವಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಮೇ ೬ ರಂದು ಶ್ರೀ ಶಂಕರಾಚಾರ್ಯ ಜಯಂತಿ ಉತ್ಸವ
More important news
ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ
04/02/2023
ಫೆ.೧೨ ರಂದು ಮಾಜಿ ಸೈನಿಕರ ರ್ಯಾಲಿ
04/02/2023
ಪ್ರೇಮಾದೇವಿ ತುಬಚಿ £ಧನ
04/02/2023
ರಾಧಾ ಕೃಷ್ಣ ನಾಟಕ ಉದ್ಘಾಟನೆ
04/02/2023