This is the title of the web page
This is the title of the web page

Please assign a menu to the primary menu location under menu

Local News

ಜನವರಿ ೧೪ ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಉತ್ಸವ


ಬೆಳಗಾವಿ, ಜ.೧೨ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ದೇಶ್ವರ ಜಯಂತಿ ಮಹೋತ್ಸವ ಜನವರಿ ೧೪ ಶನಿವಾರ ಬೆಳಗ್ಗೆ ೧೧ ಗಂಟೆಗೆ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಲಿದೆ. ಮಾನ್ಯ ಜಲ ಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ
ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ.ಅ.ಜೊಲ್ಲೆ ಯವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಅನಿಲ ಬೆನಿಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ .
ವಿಶೇಷ ಆಮಂತ್ರಿಕರಾಗಿ ಕರ್ನಾಟಕ ಕೊಳ್ಳಿಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ದುರ್ಯೋಧನ ಐಹೊಳೆ , ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪಿ.ರಾಜೀವ , ಅವರು ಉಪಸ್ಥಿತರಿರುತ್ತಾರೆ.
ಗೌರವಾನ್ವಿತ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಅನಂತ ಕುಮಾರ್ ಹೆಗಡೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಸಂಸದೆ ಮಂಗಳಾ ಅಂಗಡಿ, ಯಮಕನಮರಡಿ ಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿ, ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ, ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ, ಖಾನಾಪುರ ಕ್ಷೇತ್ರದ ಶಾಸಕರಾದ ಅಂಜಲಿ ನಿಂಬಾಳಕರ, ಕಿತ್ತೂರು ಮಹಾಂತೇಶ ದೊಡ್ಡಗೌಡರ, ರಾಮದುರ್ಗ ಶಾಸಕರಾದ ಮಾದೇವಪ್ಪ ಯಾದವಾಡ, ವಿಧಾನ ಪರಿಷತ್ ಸದಸ್ಯ ಲಕ್ಷö್ಮಣ ಸವದಿ, ವಿಧಾನ ಪರಿಷತ್ ಸದಸ್ಯ ತಳವಾರ ಸಾಬಣ್ಣ ಚನ್ನರಾಜ ಹಟ್ಟಿಹೊಳಿ, ಲಖನ ಜಾರಕಿಹೋಳಿ, ಎಂ. ನಾಗರಾಜು ಪ್ರಕಾಶ ಹುಕ್ಕೇರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಮಾರುತಿ ಅಷ್ಟಗಿ, ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷರಾದ ಮಲ್ಲಿಕಾರ್ಜುನ ತುಬಾಕಿ, ಕಾಡ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಧ್ಯಕ್ಷ ವಿಶ್ವನಾಥ ಪಾಟೀಲ ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂಜಯ ಬೆಳಗಾಂವಕರ, ಅವರು ಉಪಸ್ಥಿತರಿರುತ್ತಾರೆ.
ವಿಶೇಷ ಆಹ್ವಾನಿತರಾಗಿ, ಬೆಳಗಾವಿ ಜಿಲ್ಲಾ ಬೋವಿ ವಡ್ಡರ ಸಮಾಜ ಅಧ್ಯಕ್ಷರಾದ ಕೆ ಎಸ್ ಮಮದಾಪುರ. ಉಪನ್ಯಾಸಕರಾಗಿ ಕೆ ಎನ್ ದೊಡ್ಡಮನಿ. ವಚನ ಸಂಗೀತಗಾರರಾಗಿ ಯಾದೇಂದ್ರ ಪೂಜಾರಿ ಮತ್ತು ತಂಡದವರಿಂದ. ವಿಶೇಷ ಆಮಂತ್ರಿತರು ಪ್ರಾದೇಶಿಕ ಆಯುಕ್ತರಾದ ಎಂ. ಜಿ. ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಂಜೀವ ಎಂ. ಪಾಟೀಲ, ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕರಾದ ಏನ್. ಸತೀಶ್ ಕುಮಾರ್, ಜಿಲ್ಲೆಯ ಪೊಲೀಸ್ ಆಯುಕ್ತರಾದ ಎಂ ಬಿ. ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ ಎಚ್ ವಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ತಿಳಿಸಿದ್ದಾರೆ.


Leave a Reply