This is the title of the web page
This is the title of the web page

Please assign a menu to the primary menu location under menu

State

ಸೆ. ೧೭ ರಂದು ಶ್ರೀ ವಿಶ್ವಕರ್ಮ ಜಯಂತಿ


ಗದಗ ಸೆಪ್ಟೆಂಬರ್ ೧೩: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೆಪ್ಟೆಂಬರ್ ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಶ್ರೀ ವಿಶ್ವ ಕರ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೃಷಿ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಆಗಮಿಸುವರು. ಶ್ರೀ ವಿಶ್ವಕರ್ಮರ ಜೀವನ ಮತ್ತು ಸಂದೇಶ ಕುರಿತು ಶಿಕ್ಷಕರಾದ ವಿಶ್ವನಾಥ ಕಮ್ಮಾರ ಅವರು ಉಪನ್ಯಾಸ ನೀಡುವರು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮೊಹಮದ್ ಮೊಹಸಿನ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

 


Gadi Kannadiga

Leave a Reply