ಬೆಳಗಾವಿ : ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ 144 ಸಕ್ಷನ್ ಜಾರಿಗೊಳಿಸಿ ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಿದ್ದು ಪರೀಕ್ಷಾ ಕೇಂದ್ರಗಳ ಸುತ್ತಲೂ ಮಾರಕಾಸ್ತ್ರಗಳನ್ನು ಹೊತ್ತೊಯ್ಯುವುದು, ಮೆರವಣಿಗೆ, ಸಭೆ ನಡೆಸುವುದು ಕಾನೂನು ಬಾಹಿರ. ಒಂದುವೇಳೆ ಕಾನೂನು ನಿಯಮ ಮೀರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.