This is the title of the web page
This is the title of the web page

Please assign a menu to the primary menu location under menu

State

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಗದಗ ಅಗಸ್ಟ ೧೯: ೬ ರಿಂದ ೧೮ ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ, ಪ್ರದರ್ಶಿಸಿದ ಬಾಲಕನಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಪ್ರಕರಣವು ೦೧.೦೮.೨೦೨೨ ರಿಂದ ೩೧.೦೭.೨೦೨೩ರೊಳಗೆ ನಡೆದಿರಬೇಕು. ದಿನಾಂಕ:೦೧.೦೮.೨೦೦೫ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.೧೦,೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.೨೫,೦೦೦/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ ತಲಾ ರೂ.೧,೦೦,೦೦೦/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಜಿಗಳನ್ನು ಪಡೆದು ಸೆಪ್ಟೆಂಬರ್ ೫ ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಗದಗ, ಕೊಠಡಿ ಸಂ.೦೦೬, ಜಿಲ್ಲಾ ಆಡಳಿತ ಭವನ ಗದಗ (ದೂರವಾಣಿ ಸಂ.೦೮೩೭೨-೨೨೦೭೧೧) ಇಲ್ಲಿ ಕಛೇರಿ ಸಮಯದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.


Leave a Reply