ಗದಗ ಮೇ ೯: ಕರ್ನಾಟಕ ವಿಧಾನಸಭೆ ಚುನಾವಣೆ ೨೦೨೩ ರ ನಿಮಿತ್ತ ಮೇ ೧೦ ರಂದು ಮತದಾನ ಜರುಗಲಿದೆ. ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯೂ ಸಹ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ೨೦೨೩ ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ-೨೦೧೯ ರಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹ ಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ೨೦೨೩ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು/ ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಟ ೫ ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ ಕಾರ್ಡ ಹಾಗೂ ಮನೆ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇಮೇಲ್ ಐಡಿ ಞಣಞಛಿeomeಜiಚಿ೨೦೨೩@gmಚಿiಟ.ಛಿom ಗೆ ಮೇ ೨೦ ರಂದು ೫ ಗಂಟೆಯೊಳಗೆ ಸಲ್ಲಿಸಬೇಕು.
ಬಹುಮಾನಗಳ ವಿವರ: ಪ್ರಥಮ ಬಹುಮಾನ-೨೫,೦೦೦/- , ದ್ವಿತೀಯ ಬಹುಮಾನ-೧೫,೦೦೦/- , ತೃತೀಯ ಬಹುಮಾನ-೧೦,೦೦೦/- , ಸಮಾಧಾನಕರ ಬಹುಮಾನ-೬,೦೦೦/-, ವಿಶೇಷ ಬಹುಮಾನ-೫,೦೦೦/-.
Gadi Kannadiga > State > ಕರ್ನಾಟಕ ವಿಧಾನಸಭೆ ಚುನಾವಣೆ ಅಂಗವಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ
ಕರ್ನಾಟಕ ವಿಧಾನಸಭೆ ಚುನಾವಣೆ ಅಂಗವಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ
Suresh09/05/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023