ಕೊಪ್ಪಳ ಏಪ್ರಿಲ್ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 5ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಜಗಜೀವನರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂಧರ್ಭದಲ್ಲಿ
ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ, ಪಶು ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಜಿ.ಎಂ.ದೊಡ್ಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಸೇರಿದಂತೆ ಸಮಾಜ ಕಲ್ಯಾಣ, ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಪುತ್ಥಳಿಗೆ ಮಾಲಾರ್ಪಣೆ:-ಡಾ.ಬಾಬು ಜಗಜೀವನರಾಂ ಜಯಂತಿ ಪ್ರಯುಕ್ತ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ಸಮರ್ಪಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಚಿದಾನಂದ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಜಿ.ಎಂ.ದೊಡ್ಡಮನಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಭಜಕ್ಕನವರ್ ಸೇರಿದಂತೆ ಮತ್ತಿತರರಿದ್ದರು.