This is the title of the web page
This is the title of the web page

Please assign a menu to the primary menu location under menu

Local News

ಯಶಸ್ಸನ್ನು ಕಠಿಣ ಪರಿಶ್ರಮದಿಂದ ಪಡೆಯಲು ಸಾಧ್ಯ : ಪ್ರೊ.ತ್ಯಾಗರಾಜ ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ


ಬೆಳಗಾವಿ ೧೩ : ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿದಂತಹದು. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂಬಿಎ ವಿಭಾಗದ ಅಧ್ಯಕ್ಷರಾದ ಪ್ರೊ (ಡಾ). ತ್ಯಾಗರಾಜ ಹೇಳಿದರು.
ಅವರು ಕೆಎಲ್‌ಇ ಸಂಸ್ಥೆಯ ಬಿ.ವ್ಹಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ೨೦೨೧-೨೦೨೨ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕ್ರೀಡಾ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಮುಂದುವರೆದು, ಯುವಕರು ನಮ್ಮ ದೇಶದ ಶಕ್ತಿ, ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಅವರ ಮೇಲಿದೆ. ಅವರು ಬುದ್ಧಿವಂತಿಕೆ, ಜ್ಞಾನ ಮತ್ತು ಧೈರ್ಯದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಪದವೀಧರರಿಗೆ ಸಾಕಷ್ಟು ಉತ್ತಮ ಅವಕಾಶಗಳಿವೆ. ಅವರು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಇಂದು ನ್ಯಾಯಾಂಗ ವ್ಯವಸ್ಥೆಯು ಸಾಕಷ್ಟು ವಿಸ್ತರಿಸಿಕೊಂಡಿದೆ. ಯಶಸ್ವಿ ವೃತ್ತಿಪರರಾಗಿ ಹೊರಹೊಮ್ಮಲು ಅರ್ಹನಿಶಿಯಾಗಿ ಪ್ರಯತ್ನಿಸಬೇಕು. ಎಲ್ಲಕ್ಕೂ ಮುಖ್ಯವಾಗಿ ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಪ್ರಾಮಾಣಿಕತೆ, ನಿಷ್ಠೆ, ಬದ್ಧತೆ, ನಂಬಿಕೆ ಮೇಲೆ ಜೀವನವನ್ನು ರೂಪಿಸಿಕೊಳ್ಳಬೇಕು. ನ್ಯಾಯವಾದಿಗಳಾಗಬೇಕಾದವರು ಭಾಷೆಯ ಮೇಲೇ ಪ್ರಭುತ್ವವನ್ನು ಸಾಧಿಸಬೇಕು. ಎಷ್ಟು ನಮ್ಮಲ್ಲಿ ಸಂವಹನ ಕೌಶಲ್ಯ, ತಾಂತ್ರಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುತ್ತೇವೆಯೋ ಅಷ್ಟು ನಮ್ಮನ್ನು ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಬಡವರು ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನ್ಯಾಯವಾದಿಗಳು ಹಾಗೂ ಕಾಲೇಜು ಸ್ಥಳೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ರಾಜೇಂದ್ರ ಬಿ. ಬೆಲ್ಲದ ಅವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರಾಂಶುಪಾಲರಾದ ಡಾ.ಬಿ.ಜಯಸಿಂಹ ಸ್ವಾಗತಿಸಿ, ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಾಲೇಜಿನ ಪ್ರಧಾನ ಕಾರ್ಯದರ್ಶಿ ಪ್ರೀತಿ ಗಂಗಾಧರ್ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ವಿವಿಧ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

 


Gadi Kannadiga

Leave a Reply