This is the title of the web page
This is the title of the web page

Please assign a menu to the primary menu location under menu

State

ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಸುಂದರೇಶಬಾಬು ಎಂ. ಅಧಿಕಾರ ಸ್ವೀಕಾರ


ಕೊಪ್ಪಳ:-ಜುಲೈ.20 ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಸುಂದರೇಶಬಾಬು ಎಂ.ಅವರು ಇಂದು ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿದ್ದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಕೆ.ಪಿ.ಎಸ್.ಸಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡು, ಸುಂದರೇಶಬಾಬು ಎಂ.ಅವರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು.ಇಂದು ವಿಕಾಸ್ ಕಿಶೋರ್ ಸುರಳ್ಕರ್ ಅವರು ಸುಂದರೇಶಬಾಬು ಎಂ.ಅವರಿಗೆ ಬುಧವಾರದಂದು ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ,ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ,ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
2012ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಸುಂದರೇಶಬಾಬು ಎಂ.ಅವರು,ಮೂಲತಃ ತಮಿಳುನಾಡು ರಾಜ್ಯದವರು.ಮದುರೈ ಕೃಷಿ ವಿಶ್ವವಿದ್ಯಾಲಯದಿಂದ 2004 ರಲ್ಲಿ ಬಿ.ಎಸ್ಸಿ ಅಗ್ರಿ ಪದವಿ ಪೂರ್ಣಗೊಳಿಸಿ, ಕೆಲಕಾಲ ಕೆನರಾ ಬ್ಯಾಂಕ್ ಅಧಿಕಾರಿಯಾಗಿ ಸೇವೆ ನಿರ್ವಹಿಸಿದ್ದರು.2012 ರ ಐಎಎಸ್ ಅಧಿಕಾರಿಯಾಗಿ ಕರ್ನಾಟಕ ಕೇಡರ್‍ಗೆ ಆಯ್ಕೆಯಾಗಿ,ಧಾರವಾಡ ಉಪವಿಭಾಗಾಧಿಕಾರಿಯಾಗಿ, ವಿಜಯಪುರ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ,ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಗದಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.


Gadi Kannadiga

Leave a Reply