ಕೊಪ್ಪಳ, ನವೆಂಬರ್ ೨೪ : ಸಮಾಜ ಕಲ್ಯಾಣ ಇಲಾಖೆ ಅಡಿ ಬರುವ ಕನಕಗಿರಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ನ.೨೨ ರಂದು ಅಸ್ವಸ್ಥಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ೧೨ ವಿದ್ಯಾರ್ಥಿನಿಯರು ಗುಣಮುಖರಾಗಿ ಆಸ್ಪತ್ರೆಯಿಂದ ಹಿಂದಿರುಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆಧಾರದಲ್ಲಿ ವಸತಿ ನಿಲಯದ ಮೇಲ್ವಿಚಾರಕರನ್ನು ಅಮಾನತು ಮಾಡಿ, ಅಡುಗೆ ಸಿಬ್ಬಂದಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಅವರು ತಿಳಿಸಿದ್ದಾರೆ.
ಈ ರೀತಿಯ ಅಹಿತಕರ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಾಗಿ ಕ್ರಮ ವಹಿಸಲು ಜಿಲ್ಲೆಯ ಎಲ್ಲ ವಸತಿ ನಿಲಯಗಳ ಮೇಲ್ವಿಚಾರಕರಿಗೆ ನ.೨೪ ರಂದು ನಡೆದ ಸಭೆಯಲ್ಲಿ ಸೂಚಿಸಲಾಗಿದೆ. ಹಾಗೂ ವಸತಿ ನಿಲಯಗಳ ಅಡುಗೆ ಸಿಬ್ಬಂದಿಗೆ ಸೂಕ್ತ ಸೂಚನೆ ನೀಡಲು ತಾಲ್ಲೂಕುವಾರು ಸಭೆಗಳನ್ನು ನಡೆಸಲು ಯೋಜಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಕರ್ತವ್ಯ ಲೋಪ : ಕನಕಗಿರಿ ವಸತಿ ನಿಲಯದ ಮೇಲ್ವಿಚಾರಕರ ಅಮಾನತು