ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಗರದ ವಿಜಯನಗರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ್.ಎ.ನಂದಗಡಿ, ಯುವಕರಿಗೆ ಸ್ಫೂರ್ತಿಯಾಗಿಗುವ ಸ್ವಾಮಿ ವಿವೇಕಾನಂದರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಯುವಕರು ಅಳವಡಿಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಸ್ವಾಮಿ ವಿವೇಕಾರಂದರು ಹೇಳಿದಂತೆ ಯುವಕರಿಗೆ ಉತ್ತಮ ಚಾರಿತ್ರö್ಯ ಬಹಳ ಮುಖ್ಯ. ಹಾಗಾಗಿ ಯುವಕರು ಉತ್ತಮ ಚಾರಿತ್ರö್ಯವಂತರಾಗಬೇಕು. ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು, ಉತ್ತಮ ಗುಣಗಳನ್ನು ಹೊಂದಬೇಕು ಹಾಗೂ ತಪ್ಪುಗಳಿಂದ ಪಾಠ ಕಲಿಯಬೇಕು ಎಂದು ಎಂದು ನ್ಯಾಯಾಧೀಶರು ಸಲಹೆ ನೀಡಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ.ಬಿ.ಹುಲ್ಲೂರ, ೨ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಂಜೀವಕುಮಾರ.ಜಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ವಿಜಯನಗರ ಮಹಾವಿದ್ಯಾಲಯದ ಅಧ್ಯಕ್ಷ ಆಸುಂಡಿ.ಬಿ.ನಾಗರಾಜಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಕಿಶನ್.ಬಿ.ಮಾಡಲಗಿ, ೩ನೇ ಅಪರ ಸಿವಿಲ್ ನ್ಯಾಯಾಧೀಶರಾದ ಚೈತ್ರ.ಜೆ, ಕಾಲೇಜಿನ ಪ್ರಾಚಾರ್ಯ ವಿ.ಎಸ್.ಪ್ರಭಯ್ಯ, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ನ್ಯಾಯವಾದಿ ಕೆ.ರಾಮಪ್ಪ, ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತಾಧಿಕಾರಿ ಕಮತಗಿ ಮತ್ತಿತರರು ಇದ್ದರು.
Gadi Kannadiga > State > ಸ್ವಾಮಿ ವಿವೇಕಾನಂದರ ಆದರ್ಶ ಇಂದಿಗೂ ಪ್ರಸ್ತುತ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023