This is the title of the web page
This is the title of the web page

Please assign a menu to the primary menu location under menu

State

ವ್ಯವಸ್ಥಿತ, ಅರ್ಥಪೂರ್ಣ ಸ್ವಾತಂತ್ರೊö್ಯÃತ್ಸವ ದಿನಾಚರಣೆಗೆ ಕ್ರಮ ವಹಿಸಿ


ಗದಗ ಜುಲೈ ೨೫ : ಜಿಲ್ಲೆಯಲ್ಲಿ ಅಗಸ್ಟ ೧೫ ರಂದು ಸ್ವಾತಂತ್ರೊö್ಯÃತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿಹಾಗೂ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಜರುಗಿದ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರೊö್ಯÃತ್ಸವ ಮುನ್ನಾ ದಿನ ಅಂದರೆ ಅಗಸ್ಟ ೧೪ ಹಾಗೂ ೧೫ ರಂದು ಎರಡು ದಿವಸಗಳ ಕಾಲ ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು,ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಂಗಡಿಗಳು, ಮಳಿಗೆಗಳ ಮುಂದೆ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು.
ಸ್ವಾತಂತ್ರೊö್ಯÃತ್ಸವದ ಪ್ರಯುಕ್ತ ಅಗಸ್ಟ ೧೫ ರಂದು ಬೆ.೭.೩೦ ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದಧ್ವಜಾರೋಹಣ ಕಾರ್ಯಕ್ರಮ ಜರುಗುವುದು. ನಂತರ ಬೆ.೯ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಂದು ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಪ್ಪದೇ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೂ ಸಹ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು.ತುರ್ತು ಸೇವೆಗಾಗಿ ಅಂಬುಲೆನ್ಸ್ನ ವ್ಯವಸ್ಥೆಗೆ ಕ್ರಮ ವಹಿಸಬೇಕು.ಒಟ್ಟಾರೆಯಾಗಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರೊö್ಯÃತ್ಸವ ಸಮಾರಂಭವನ್ನು ವಿಶೇಷ ಆಸಕ್ತಿಯಿಂದ ಆಚರಿಸಲು ಕ್ರಮ ವಹಿಸಬೇಕೆಂದರು.
ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ.ಅವರು ಮಾತನಾಡಿ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಸ್ವಾತಂತ್ರೊö್ಯÃತ್ಸವವನ್ನು ವಿಜೃಂಭಣೆಯಿಂದ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಶಿಷ್ಟಾಚಾರದನುಸಾರವಾಗಿ ಆಮಂತ್ರಣ ಪತ್ರಿಕೆ ಮುದ್ರಣ, ಅಲ್ಪೋಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ, ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ಧಪ್ಪ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಜಿ.ಬಿ.ಶಿರೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Leave a Reply