This is the title of the web page
This is the title of the web page

Please assign a menu to the primary menu location under menu

State

ಪ್ಲಾಸ್ಟಿಕ್ ಮಾರಾಟ, ಬಳಕೆ ತಡೆಗಟ್ಟಲು ಕ್ರಮ ವಹಿಸಿ


ವಿಜಯಪುರ ಜೂನ್ 3  : ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಜೂನ್ 02ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಹಾಗೂ ಹಸಿರು ನ್ಯಾಯಾಧೀಕರಣ ಪೀಠದ ನಿರ್ದೇಶನಗಳಂತೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟಲು, ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಹಸಿ ಕಸ ಹಾಗೂ ಒಣ ಕಸ ಹಾಗೂ ಹಾನಿಕಾರಕ ಕಸವನ್ನು ವಿಂಗಡಿಸಿ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆಯ ವಾಹನಗಳಿಗೆ ನೀಡುವುದಾಗಬೇಕು. ಎಲ್ಲೆಂದರಲ್ಲಿ ಸಾರ್ವಜನಿಕರು ಕಸವನ್ನು ಎಸೆಯಬಾರದು ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂಬ ಅಂಶಗಳ ಮೇಲೆ ನೀಡಿದ ನಿರ್ದೇಶನದಂತೆ ಮಹಾನಗರಪಾಲಿಕೆಯ ಆಯುಕ್ತರು ತಮ್ಮ ನೇತೃತ್ವದಲ್ಲಿ ಮಹಾನಗರಪಾಲಿಕೆಯ ನೈರ್ಮಲ್ಯ ಶಾಖೆ ಅಧಿಕಾರಿ ಹಾಗೂ ಸಿಬ್ಬಂದಿಯೊAದಿಗೆ ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು, ಮಾರಾಟಗಾರರ ಮೇಲೆ ದಂಡಿ ವಿದಿಸಿ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ನಗರದ ಎಲ್ಲಾ ವ್ಯಾಪಾರ ವಹಿವಾಟದಾರರು ಕಟ್ಟುನಿಟ್ಟಾಗಿ ಸರ್ಕಾರದ ಹಾಗೂ ಹಸಿರು ನ್ಯಾಯಾಧೀಕರಣ ಪೀಠದ ನಿರ್ದೇಶನಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ನಿರ್ದಾಕ್ಷಿಣ್ಯ ಕ್ರಮಜರುಗಿಸಲಾಗುವುದು ಎಂಬ ಸಂದೇಶವನ್ನು ವ್ಯಾಪಾರಸ್ಥರಿಗೆ ಮಹಾನಗರಪಾಲಿಕೆ ವತಿಯಿಂದ ತಿಳಿಸಲಾಗುವುದು ಎಂದು ಇದೆ ವೇಳೆ ಮಹಾಹನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕೆ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ, ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.


Gadi Kannadiga

Leave a Reply