ಬೆಳಗಾವಿ : ರೈತ ವಿರೋಧಿ ಮೂರು ಕೃಷಿ ಮಸೂದೆ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದರೂ ರಾಜ್ಯದಲ್ಲಿ ಹಿಂಪಡೆಯಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಏ.21 ರಂದು ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.
ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಏ.21 ರಂದು ಬೆಂಗಳೂರಿನ ಬಸವನಗುಡಿ ಕಾಲೇಜಿನಲ್ಲಿ ರೈತರ ಬೃಹತ್ ಸಮಾವೇಶ ನಡೆಯಲಿದೆ ಎಂದ ಅವರು, ಕೇಂದ್ರ ಸರಕಾರ ತಂದಿರುವ ಕೃಷಿ ಕಾಯ್ದೆಯನ್ನು ಶಾಸನ ಬದ್ಧವಾಗಿ ಹಿಂಪಡೆಯಲಾಗಿದೆ. ಆದರೆ ಕರ್ನಾಟಕದಲ್ಲಿ ಆ ಕಾಯ್ದೆಯನ್ನು ತಳಮಟ್ಟದಲ್ಲಿ ಅನುಷ್ಠಾನಕ್ಕೆ ಜಾರಿಗೆ ತಂದು, ಭೂ ಸ್ವಾಧಿನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಸಿಎಂ ಗಮನಕ್ಕೆ ತಂದರೂ. ಬೆಳಗಾವಿ ಅಧಿವೇಶನದಲ್ಲಿ ತೆಗೆಯುವುದಾಗಿ ಭರವಸೆ ನೀಡಿದರು. ಬಳಿಕ ಬೆಂಗಳೂರಿನ ಅಧಿವೇಶನದಲ್ಲಿ ಹಿಂಪಡೆಯುವುದಾಗಿ 21 ರೊಂದರೊಳಗೆ ಗಡವು ನೀಡಲಾಗುವುದು. ಬಳಿಕ ಸಮಾವೇಶದಲ್ಲಿ ಕಠಿಣ ನಿಲುವು ಪಡೆಯಲಾಗುವುದು ಎಂದರು.
ರಾಜಕೀಯ ಪಕ್ಷಗಳಿಗೆ, ನಾಯಕರಿಗೆ, ಪಕ್ಷಗಳಿಗೆ ಸಿದ್ದಾಂತ ಇಲ್ಲ. ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಪರ್ಯಾಯ ರಾಜಕಾರಣ ಹುಟ್ಟು ಹಾಕುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಸರ್ಕಾರ ಭ್ರಷ್ಟಾಚಾರ ಸಮರ್ಥನೆ ಮಾಡಿಕೊಳ್ಳುವುದು ದುರ್ದೈವದ ಸಂಗತಿ. ವಿರೋಧ ಪಕ್ಷಗಳು 40 ಪ್ರತಿಶತ ಸರ್ಕಾರ ಎಂದು ಆರೋಪಿಸಿದರು. ಅದರೆ ಸಿಎಂ ಅದನ್ನು ತಿರಸ್ಕಾರ ಮಾಡುತ್ತಾರೆ ಎಂದು ಕೊಂಡಿದ್ದೇವು. ಆದರೆ ಸಿಎಂ ಹೇಳುತ್ತಾರೆ. ನೀವೆ ಪ್ರಾರಂಭ ಮಾಡಿದ್ದು, ಅದನ್ನು ಮುಂದುವರೆಸುತ್ತಿದ್ದೇವೆ ಎಂದರೆ ಸರ್ಕಾರದಲ್ಲಿ ಅಧಿಕೃತವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ತಿಳಿದು ಬರುತ್ತದೆ ಎಂದರು.
ಬೊಮ್ಮಾಯಿ ಅವರ ಸರ್ಕಾರ ಭ್ರಷ್ಟಾಚಾರ ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ. ಅದಕ್ಕೆ ರಾಜ್ಯದ ಜನರು ಪರ್ಯಾಯ ಪಕ್ಷದ ಆಲೋಚನೆ ಮಾಡುವುದು ಸೂಕ್ತ ಎಂದು ತಿಳಿಸಿದರು.
ಸರ್ಕಾರದ ಕೃಷಿ ಮಾರುಕಟ್ಟೆ ಹಿತ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು. ಖಾಸಗಿ ಮಾರುಕಟ್ಟೆ ಮಾಡಲು ಕಾಯ್ದೆಯನ್ನು ಮಾಡಿಕೊಟ್ಟ ಬಿಜೆಪಿ ಸರ್ಕಾರ ಮಾಡಿಕೊಟ್ಟಿದೆ. ಬೆಳಗಾವಿಯಲ್ಲಿ ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಿದ್ದು ಬಿಜೆಪಿ ಸರ್ಕಾರದಿಂದಲೇ ಅದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಭಕ್ತರಹಳ್ಳಿ ಬೈರೇಗೌಡ, ಭೀಮಶಿ ಗಡಾದಿ, ಸತ್ಯಪ್ಪ ಮಲ್ಲಾಪುರ, ಗಣೇಶ ಇಳಗೇರ, ರಾಜು ಮರವೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.