This is the title of the web page
This is the title of the web page

Please assign a menu to the primary menu location under menu

Local News

ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ


ಹುಬ್ಬಳ್ಳಿ: ನವಲಗುಂದ ಪುರಸಭೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಮಾತನಾಡಿದ ಅವರು, ಎಂತಹ ಪರಿಸ್ಥಿತಿ ಎದುರಾದರೂ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುವುದಿಲ್ಲ. ನವಲಗುಂದ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿಯವರೇ ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಇದೀಗ 17 ಸದಸ್ಯರ ಬಹುಮತ ಕಾಂಗ್ರೆಸ್ ಗೆ ಇದ್ದು, ನಮ್ಮ ಪಕ್ಷದ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಈ ಹಿಂದೆ ಕಾಂಗ್ರೆಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೇ ಆಗಲೇ ಧ್ವನಿ ಎತ್ತಬೇಕಿತ್ತು. ಆದರೆ ಜೆಡಿಎಸ್ ನವರು ಅಧಿಕಾರಕ್ಕೆ ಬರಬಾರದೆಂದು ನಮಗೆ ಬೆಂಬಲ ನೀಡಿದ್ದಾರೆ ಹೊರತು ನಮ್ಮ ಪಕ್ಷದ ಯಾವುದೇ ಸದಸ್ಯರು ಬಿಜೆಪಿಯೊಂದಿಗೆ ಕೈಜೋಡಿಸಿಲ್ಲ. ಹಾಗಾಗಿ ಇದೀಗ ಅವರೊಂದಿಗೆ ಕೈಜೋಡಿಸಿದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವೆ: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಂಬಂಧ ಸೃಷ್ಟಿಯಾಗಿರುವ ಗೊಂದಲವನ್ನು ನಿವಾರಿಸುವಂತೆ ವರಿಷ್ಠರಿಗೆ ಮನವಿ ಮಾಡಲಾಗಿದೆ. ನಾನು ಕೂಡಾ ಹು-ಧಾ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್.ಟಿ ಅಧ್ಯಕ್ಷ ನಾಗರಾಜ್ ಹೆಗ್ಗನವರ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ರೋಹಿತ್ ಘೋಡಕೆ, ಬಿಸ್ತು ಬೆಳಗಾಂಕರ್, ಬಸವರಾಜ ಪಾಲ್ಗೊಂಡಿದ್ದರು.


Gadi Kannadiga

Leave a Reply