ಗಡಿ ಕನ್ನಡಿಗ ಸುದ್ದಿ
ಖಾನಾಪುರ: ತಾಲೂಕಿನ ಸಂಗರಗಾಳಿ ಗ್ರಾಮದ ವಿಷ್ಣು ಪರಶುರಾಮ ಕಡೋಲ್ಕರ್ (35) ಎಂಬಾತನು 2024ರಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯಾಗುವಂತೆ ಮಾಡಿದ್ದ ಘಟನೆ ಬಹಿರಂಗವಾಗಿತ್ತು. ಈ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಕೈಗೆತಿಕೊಂಡಿದ್ದ ಖಾನಾಪುರ ಆಗಿನ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯ್ಕ ಹಾಗೂ ಸಹಾಕನಾಗಿ ಮಂಜುನಾಥ ಮುಸಳಿ ತನಿಖೆ ನಡೆಸಿ ಅಪರಾಧಿಗಳನ್ನ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಸದರ ಪ್ರಕರಣದ ವಿಚಾರಣೆ ಬೆಳಗಾವಿ ವಿಶೇಷ POCSO ನ್ಯಾಯಾಲಯದಲ್ಲಿ, ವಿಚಾರಣೆಯ ವೇಳೆ ಸರ್ಕಾರದ ಪರವಾಗಿ ಅಭಿಯೋಜಕ ಎಲ್.ವಿ. ಪಾಟೀಲ ಅವರು ಪರಿಣಾಮಕಾರಿ ರೀತಿಯಲ್ಲಿ ವಾದ ಮಂಡಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಾನನೀಯ ನ್ಯಾಯಾಧೀಶೆ ಸೌ. ಸಿ.ಎಂ. ಪುಷ್ಪಲತಾ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಮತ್ತೊಬ್ಬ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ
ತಾಲ್ಲೂಕಿನ ಸಂಗರಗಾಳಿ ಗ್ರಾಮದ ಸಿರಿಯಲ್ ಗುಸ್ತಿಮಾ ರೋಡ್ರಿಗ್ಸ್ (ವಯಸ್ಸು 42) ಎಂಬ ವ್ಯಕ್ತಿ 2024ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಆಗಿನ ಪೊಲೀಸ್ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಅವರು ನಡೆಸಿದ್ದು, ಮಂಜುನಾಥ ಮುಸಳಿ ಅವರು ತನಿಖಾ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ನ್ಯಾಯಾಲಯೀನ ಪ್ರಕ್ರಿಯೆಗೆ ಪ್ರವೀಣ ಹೊಂದಡ ಅವರು ಸಹಕರಿಸಿದರು.
ಈ ಪ್ರಕರಣದ ವಿಚಾರಣೆ ಬೆಳಗಾವಿಯ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ನಡೆದು ವಿಚಾರಣೆ ವೇಳೆ ಆರೋಪಿ ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶೆ ಸೌ. ಸಿ.ಎಂ. ಪುಷ್ಪಲತಾ ಅವರು ಆರೋಪಿಗೆ 30 ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.