ಬಳ್ಳಾರಿ,ಜ.೧೮: ಬಳ್ಳಾರಿ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನ ಕುಮಾರ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಎಡಿಸಿ ಪಿ.ಎಸ್ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ರಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಇತರರಿದ್ದರು.
Gadi Kannadiga > State > ಉತ್ಸವದ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ