This is the title of the web page
This is the title of the web page

Please assign a menu to the primary menu location under menu

Local News

ಸಿರಿಧಾನ್ಯ ನಡಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ


ಬಳ್ಳಾರಿ,ಜ.೧೮: ಬಳ್ಳಾರಿ ಉತ್ಸವದ ಅಂಗವಾಗಿ ಕೃಷಿ ಇಲಾಖೆ ವತಿಯಿಂದ “ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಮಾನವನ ಆರೋಗ್ಯಕ್ಕೆ ಸಿರಿಧಾನ್ಯಗಳ ಮಹತ್ವ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಸಿರಿಧಾನ್ಯ ನಡಿಗೆಗೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಸೋಮಶೇಖರ ರೆಡ್ಡಿ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗುತ್ತಿಗನೂರು ವಿರೂಪಾಕ್ಷಗೌಡ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಎಡಿಸಿ ಪಿ.ಎಸ್.ಮಂಜುನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗಹಿಸಿದ್ದರು.
ಈ ಜಾಥಾವು ಮಾನವನ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆಯ ಕುರಿತು ಮಾಹಿತಿ ಫಲಕಗಳ ಮೂಲಕ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಆರಂಭವಾಗಿ ಮೋತಿ ವೃತ್ತದಿಂದ ಎಸ್.ಪಿ ಸರ್ಕಲ್ ಮೂಲಕ ದುರುಗಮ್ಮ ದೇವಸ್ಥಾನ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದಿಂದ ಪುನಃ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು.


Leave a Reply