This is the title of the web page
This is the title of the web page

Please assign a menu to the primary menu location under menu

State

ಜಿಲ್ಲೆಯಲ್ಲಿ ಆ.೩೦ ರಂದು ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ ಚಾಲನೆ


ಗದಗ ಆ.೨೮: ರಾಷ್ಟ್ರದಲ್ಲಿಯೇ ಅಚ್ಚರಿ ಮೂಡಿಸಿದಂತಹ, ಹೆಣ್ಣು ಮಕ್ಕಳು ಸಮಾಜದಲ್ಲಿ ಆರ್ಥಿಕ ಸ್ವಾವಲಂಭನೆ ತರುವಂತಹ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ ಆಗಸ್ಟ ೩೦ ರಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಮೈಸೂರಿನಲ್ಲಿ ಚಾಲನೆ ನೀಡಲಿದ್ದು ಅದೇ ದಿನ ಗದಗ ನಗರದ ಪಂ.ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ ಜಿಲ್ಲಾ ಮಟ್ಟದಲ್ಲಿ ಮಧ್ಯಾಹ್ನ ೧೨ ಗಂಟೆಗೆ ಚಾಲನೇ ನೀಡಲಾಗುವದು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.
ಬೆಟಗೇರಿಯ ಗಾಂಧೀ ನಗರದಲ್ಲಿ ನಿರ್ಮಾಣವಾದಂತಹ ಸುಸಜ್ಜಿತ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈಗಾಗಲೇ ಗೃಹ ಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ೨,೧೪,೯೨೩ ಫಲಾನುಭವಿಗಳು ನೋಂದಣಿ ಮಾಡಿಕೊಂಡಿರುತ್ತಾರೆ. ಅಂದಾಜು ಹನ್ನೆರೆಡು ಸಾವಿರ ಫಲಾನುಭವಿಗಳ ನೋಂದಣಿ ಕಾರ್ಯವು ತಾಂತ್ರಿಕ ಕಾರಣಗಳಿಂದಾಗಿ ವಿಳಂಭವಾಗಿದೆ. ಇವುಗಳನ್ನು ಕೂಡ ನೋಂದಣಿ ಮಾಡಲು ಕ್ರಮ ವಹಿಸಲು ಸೂಚಿಸಲಾಗಿದೆ.
ಸರ್ಕಾರದ ಈ ಮಹಾತ್ವಾಕಾಂಕ್ಷೆ ಯೋಜನೆ ಜಾರಿಯಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಸ್ವಾಭಿಮಾನದ ಜೀವನ ನಡೆಸಲು ಮುನ್ನುಡಿ ದೊರಕಿದಂತಾಗುತ್ತದೆ. ಅಲ್ಲದೇ ಬಡಕುಟುಂಬಗಳ ಆರ್ಥಿಕ ಅಡಚಣೆ ನಿವಾರಣೆಗೆ ತುಂಬಾ ಉಪಯುಕ್ತವಾಗಿದ್ದು. ಈ ಯೋಜನೆ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಕುಟುಂಬಗಳಿಗೆ ವಾರ್ಷಿಕ ೫೦-೬೦ ಸಾವಿರ ಆರ್ಥಿಕ ಸಹಾಯ ದೊರೆಯುತ್ತದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ೧.೪ ಕೋಟಿ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲಿವೆ ಇದೊಂದು ಕ್ರಾಂತಿಕಾರಕ ಬೆಳವಣಿಗೆಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಗರೀಬಿ ಹಟಾವೋ ಆಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ನುಡಿದರು.ಸರ್ಕಾರಕ್ಕೆ ನೂರು ದಿನ: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆಯುವ ಮೂಲಕ ನೂರು ದಿನ ಯಶಸ್ವಿಯಾಗಿ ಪೂರೈಸಿದೆ. ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದಾಗಿನಿಂದ ನಲವತ್ತು ಕೋಟಿ ಮಹಿಳಾ ಫಲಾನುಭವಿಗಳು ಯೋಜನೆಯ ಲಾಭ ಪಡೆದಿರುತ್ತಾರೆ. ಇದು ದೇಶದಲ್ಲಿಯೇ ಕ್ರಾಂತಿಕಾರಕ ಬದಲಾವಣೆಯಾಗಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ ಶೇ.೯೩ ರಷ್ಟು, ಅನ್ನಭಾಗ್ಯ ಯೋಜನೆಯಡಿ ಶೇ.೯೮ ರಷ್ಟು ಗುರಿ ಸಾಧನೆಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆ ಮುಂಚೂಣಿಯಲ್ಲಿದೆ ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವಾಯ್.ಶೆಟ್ಟಪ್ಪನವರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣಗು ಗೊಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಉಪಸ್ಥಿತರಿದ್ದರು.


Leave a Reply